This is the title of the web page
This is the title of the web page

Please assign a menu to the primary menu location under menu

Local News

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ


ಬೆಳಗಾವಿ,ಜೂನ್೨೦): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‌ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರÀ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ ೪೫ ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತರು ದಿನಾಂಕ:೨೮.೦೬.೨೦೨೨ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಛೇರಿಯಲ್ಲಿ ಬೆಳಿಗ್ಗೆ ೧೦.೦೦ ಗಂಟೆಯಿಂದ ಸಂಜೆ ೫.೦೦ ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ೦೮೨೧-೨೫೧೫೯೪೪ ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply