This is the title of the web page
This is the title of the web page

Please assign a menu to the primary menu location under menu

Local News

ಹಿಂದುಳಿದ ವರ್ಗಗಳ ವಸತಿ ನಿಲಯ ವಿದ್ಯಾರ್ಥಿಗಳ ೧೦೦% ಸಾಧನೆ


ಬೆಳಗಾವಿ,ಮೇ.೨೩: ೨೦೨೧-೨೦೨೨ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ ಪೂರ್ವ ಬಾಲಕ/ಬಾಲಕಿಯರ ವಸತಿ ನಿಲಯಗಳಲ್ಲಿದ್ದು ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮತ್ತು ೬೨೫ಕ್ಕೆ ೬೨೫ ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ವಸತಿ ನಿಲಯದ ವಿದ್ಯಾರ್ಥಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರ ನಿವಾಸಕ್ಕೇ ತೆರಳಿ ಸತ್ಕರಿಸಿ ಅಭಿನಂದಿಸಿದ್ದಾರೆ.
ಪರೀಕ್ಷೆ ಫಲಿತಾಂಶದಲ್ಲಿ ೬೨೫ಕ್ಕೆ ೬೨೫ ಅಂಕಗಳಿಸಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಂದಗಡದ ಸಂಗೋಳ್ಳಿ ರಾಯಣ್ಣ ಸ್ಮಾರಕ ಸನಿವಾಸ ಶಾಲೆ ವಿದ್ಯಾರ್ಥಿನಿ ಸ್ವಾತಿ ತೋಲಗಿ ಹಾಗೂ ಯಕ್ಸಂಬಾ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿ ಶಂಬು ಖಾನಾಯಿ ಅವರ ಸ್ವ ನಿವಾಸಕ್ಕೆ ತೆರಳಿ ಜಿಲ್ಲಾ ಅಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರು, ಸಮನ್ವಯಾಧಿಕಾರಿಗಳು, ಕಛೇರಿ ಮೇಲ್ವಿಚಾರಕರು, ಲೆಕ್ಕ ಅಧೀಕ್ಷಕರು ಮತ್ತು ಕಛೇರಿಯ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು


Gadi Kannadiga

Leave a Reply