ಕೊಪ್ಪಳ ಆಗಸ್ಟ್ ೧೯: ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಡಿ.ದೇವರಾಜ ಅರಸು ಅವರ ೧೦೮ನೇ ಜನ್ಮ ದಿನಾಚರಣೆ ಸಮಾರಂಭ ಆಗಸ್ಟ್ ೨೦ರ ಬೆಳಗ್ಗೆ ೧೧ ಗಂಟೆಗೆ ಕೊಪ್ಪಳ ಸಾಹಿತ್ಯ ಭವನದಲ್ಲಿ ನಡೆಯಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಉದ್ಘಾಟಿಸುವರು. ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಆಯುಕ್ತರಾದ ಕೆ.ಎ.ದಯಾನಂದ್ ಉಪಸ್ಥಿತರಿರುವರು.
ಕಾರಟಗಿಯ ಸಿಎಂಎನ್ ಪದವಿಪೂರ್ವ ಕಾಲೇಜಿನ ಅಧ್ಯಾಪಕರಾದ ಡಾ.ಹನುಮಂತಪ್ಪ ಚಂದಲಾಪುರ ವಿಶೇಷ ಉಪನ್ಯಾಸ ನೀಡುವರು.
ಅಂದು ಬೆಳಗ್ಗೆ ೮.೩೦ಕ್ಕೆ ಗವಿಸಿದ್ದೇಶ್ವರ ಮಠದಿಂದ ಜವಾಹರ ರಸ್ತೆವರೆಗೆ ಡಿ.ದೇವರಾಜ ಅರಸುರವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಜಯಕುಮಾರ ಗೌಡ ಪಾಟೀಲ ತಿಳಿಸಿದ್ದಾರೆ.
Gadi Kannadiga > State > ಶ್ರೀ ಡಿ.ದೇವರಾಜ ಅರಸು ಅವರ ೧೦೮ನೇ ಜನ್ಮ ದಿನಾಚರಣೆ
ಶ್ರೀ ಡಿ.ದೇವರಾಜ ಅರಸು ಅವರ ೧೦೮ನೇ ಜನ್ಮ ದಿನಾಚರಣೆ
Suresh19/08/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಪೌರ ಕಾರ್ಮಿಕರ ದಿನಾಚರಣೆ
23/09/2023