ಬೆಳಗಾವಿ: 2021-22ನೇ ತತ್ಸಮಾನ ವೃಂದದ ಹುದ್ದೆಗಳ ಲಿಖಿತ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯಲ್ಲಿ ನಿಷ್ಪಕ್ಷಪಾತವಾಗಿ ಹಾಗೂ ಯಾವುದೇ ಅಡೆತಡೆಗಳಿಲ್ಲದೇ ನಡೆಯುವಂತೆ ನೋಡಿಕೊಳ್ಳಲು ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ 144 ನಿಷೇಧಾಜ್ಞೆಯನ್ನು ಬೆಳಗಾವಿ ನಗರದ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ ಬಿ ಅವರು ಆದೇಶವನ್ನು ಹೊರಡಿಸಿದ್ದಾರೆ.
ಬೆಳಗಾವಿ ನಗರದ ಮಹಿಳಾ ವಿದ್ಯಾಲಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಫೆಬ್ರುವರಿ 6 ರಿಂದ 8ರ ವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಒ ಮತ್ತು ಪ್ರೌಢ ಶಾಲಾ ಶಿಕ್ಷಕರ ತತ್ಸಮಾನ ವೃಂದದ ಹುದ್ದೆಗಳ ಲಿಖಿತ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳ ಕಾಲಕ್ಕೆ ದಂಡ ಪ್ರಕ್ರಿಯೆ ಸಂಹಿತೆಯ ಸಿಆರ್ಪಿಸಿ 1973 ಕಲಂ 144 ಸಿ.ಅರ್.ಪಿ.ಸಿ ಅಡಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ಪರೀಕ್ಷೆಗಳು ನಡೆಯುವ ಸಮಯದಲ್ಲಿ ನಿಷೇದಾಜ್ಞೆ ಆದೇಶವನ್ನು ಹೊರಡಿಸಲಾಗಿದೆ.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ, ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ ಸುತ್ತಳತೆಯಲ್ಲಿ ಅಭ್ಯರ್ಥಿಗಳು, ಶಾಲಾ / ಕಾಲೇಜ ಸಿಬ್ಬಂದಿ ಜನರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರು, ಪಾಲಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ, ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ಅಂತರದಲ್ಲಿ ದ್ವನಿವರ್ಧಕ ಉಪಯೋಗಿಸುವದನ್ನು ನಿಷೇಧಿಸಲಾಗಿದೆ ಎಂದು ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ ಬಿ ಅವರು ಪ್ರಕಟಣೆಯಲ್ಲಿ ಆದೇಶವನ್ನು ಹೊರಡಿಸಿದ್ದಾರೆ.