ಕೊಪ್ಪಳ, ನವೆಂಬರ್ ೧೪ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ ಹಾಗೂ ಸದಸ್ಯರನ್ನೊಳಗೊಂಡ ತಂಡವು ನವೆಂಬರ್ ೧೭ ರಿಂದ ೧೯ ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ನವೆಂಬರ್ ೧೭ ರಂದು ಬೆಳಿಗ್ಗೆ ೦೯ ಗಂಟೆಯಿಂದ ೧೧ ಗಂಟೆಯವರೆಗೆ ಕೊಪ್ಪಳ ತಾಲ್ಲೂಕಿನ ಹಿರೇಸಿಂಧೋಗಿ ವ್ಯಾಪ್ತಿಯಲ್ಲಿ, ಮಧ್ಯಾಹ್ನ ೧೨ ಗಂಟೆಯಿಂದ ೦೧ ಗಂಟೆಯವರೆಗೆ ಹಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ, ಮಧ್ಯಾಹ್ನ ೦೨.೩೦ ಗಂಟೆಯಿಂದ ೦೩.೩೦ ಗಂಟೆಯವರೆಗೆ ಯಲಬುರ್ಗಾ ತಾಲ್ಲೂಕಿನ ತಳಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ, ಸಂಜೆ ೦೪.೧೫ ಗಂಟೆಯಿಂದ ೦೬ ಗಂಟೆಯವರೆಗೆ ಇಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸವಾಗಿರುವ ಗೌಳಿ, ನೊಳಂಬ, ವೀರಶೈವ ಲಿಂಗಾಯತ ಪಂಚಮಸಾಲಿ, ಆದಿಬಣಜಿಗ, ಕುಡುವಕ್ಕಲಿಗ ಹಾಗೂ ಇತರ ಒ.ಬಿ.ಸಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸ್ಥಳ ಪರಿಶೀಲನೆ ಮತ್ತು ಅಧ್ಯಯನ ನಡೆಸುವರು.
ನವೆಂಬರ್ ೧೮ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ಇಂಜಿನಿಯರ್ ವಿದ್ಯುತ್ ನಿಗಮ, ಗಂಗಾ ಕಲ್ಯಾಣ ಯೋಜನೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ, ಪ್ರಗತಿ ಕುರಿತು ಸಭೆ ನಡೆಸುವರು. ಮಧ್ಯಾಹ್ನ ೦೧ ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು.
ಮಧ್ಯಾಹ್ನ ೦೨.೩೦ ಗಂಟೆಯಿಂದ ೦೩.೩೦ ಗಂಟೆಯವರೆಗೆ ಕುಷ್ಠಗಿ ತಾಲ್ಲೂಕಿನ ನವಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ, ಸಾಯಂಕಾಲ ೦೪.೧೫ ಗಂಟೆಯಿಂದ ೦೬ ಗಂಟೆಯವರೆಗೆ ಗುರುಮಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸವಾಗಿರುವ ಗೌಳಿ, ನೊಳಂಬ, ವೀರಶೈವ ಲಿಂಗಾಯತ ಪಂಚಮಸಾಲಿ, ಆದಿಬಣಜಿಗ, ಕುಡುವಕ್ಕಲಿಗ ಹಾಗೂ ಇತರ ಒ.ಬಿ.ಸಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸ್ಥಳ ಪರಿಶೀಲನೆ ಮತ್ತು ಅಧ್ಯಯನ ನಡೆಸುವರು.
ನವೆಂಬರ್ ೧೯ ರಂದು ಬೆಳಿಗ್ಗೆ ೦೯ ಗಂಟೆಯಿಂದ ೧೧ ಗಂಟೆಯವರೆಗೆ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ, ಮಧ್ಯಾಹ್ನ ೧೨ ಗಂಟೆಯಿಂದ ೦೧ ಗಂಟೆಯವರೆಗೆ ಚಿಕ್ಕಮಾದಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸವಾಗಿರುವ ಗೌಳಿ, ನೊಳಂಬ, ವೀರಶೈವ ಲಿಂಗಾಯತ ಪಂಚಮಸಾಲಿ, ಆದಿಬಣಜಿಗ, ಕುಡುವಕ್ಕಲಿಗ ಹಾಗೂ ಇತರ ಒ.ಬಿ.ಸಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸ್ಥಳ ಪರಿಶೀಲನೆ ಮತ್ತು ಅಧ್ಯಯನ ನಡೆಸುವರು. ಮಧ್ಯಾಹ್ನ ೦೩ ಗಂಟೆಗೆ ಗಂಗಾವತಿಯಿಂದ ಕುಂದಾಪುರ ಕಡೆಗೆ ಪ್ರಯಾಣ ಬೆಳೆಸುವರು.
ನವೆಂಬರ್ ೨೦ ರಂದು ಕುಂದಾಪುರದಿಂದ ಕೊಪ್ಪಳ ಮಾರ್ಗವಾಗಿ ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿ.ಎಂ.ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ನ.೧೭ ರಿಂದ ೧೯ ರವರೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
ನ.೧೭ ರಿಂದ ೧೯ ರವರೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
Suresh14/11/2022
posted on