ಮೂಡಲಗಿ: ಹಸಿರು ಕಾಂತ್ರಿಯ ಮೂಲಕ ದೇಶದ ಆಹಾರ ಸಮಸ್ಯೆ ನಿವಾರಿಸಿದ ಮಹಾನ್ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಮತ್ತು ಕೃಷಿ ಸಚಿವರಾಗಿದ್ದ ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶ ಎಂದೂ ಮರೆಯಲ್ಲೂ ಸಾಧ್ಯವಿಲ್ಲವೆಂದು ಗೋಕಾಕ ಎಸ್.ಎಲ್.ಜೆ. ಪಿಯು ಕಾಲೇಜಿನ ಉಪನ್ಯಾಸಕ ವ್ಹಿ ಬಿ ಖಣಿಲ್ದಾರ ಹೇಳಿದರು.
ಮಂಗಳವಾರದಂದು ತಹಶೀಲ್ದಾರ ಕಚೇರಿಯ ಸಂಭಾಗಣದಲ್ಲಿ ತಾಲೂಕಾ ಆಡಳಿತ, ಪುರಸಭೆ, ತಾಪಂ, ಸಮಾಜ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಜರುಗಿದ, ಡಾ.ಬಾಬು ಜಗಜೀವನರಾಮ್ರವರ ೧೧೫ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಬಾಬು ಜಗಜೀವನರಾಮ್ ಅವರು ತಮ್ಮ ಆಡಳಿತ ಅವಧಿಯಲ್ಲಿ ಮಾಡಿದ ದೇಶ ಸೇವೆ ಅವರನ್ನು ಸದಾ ಸ್ಮರಿಸುವಂತೆ ಮಾಡಿದೆ. ಕೃಷಿ ಕ್ಷೇತ್ರದಲ್ಲಿ ಅನೇಕ ವೈಜ್ಞಾನಿಕ ಬದಲಾವಣೆಗಳ ಮೂಲಕ ದೇಶದ ಆಹಾರ ಸಮಸ್ಯೆ ನಿವಾರಿಸುವ ಮಹತ್ವದ ನಿರ್ಣಯ ಇವರನ್ನು ಅಜಾರಾಮರಗೊಳ್ಳುವಂತೆ ಮಾಡಿದೆ ಎಂದರು.
ಬಿಇಒ ಅಜೀತ ಮನ್ನಿಕೇರಿ ಹಾಗೂ ಸಿಪಿಐ ವೆಂಕಟೇಶ ಮುರನಾಳ ಮಾತನಾಡಿ, ಬಾಬು ಜಗಜೀವನರಾಮ್ ಅವರು ರಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಮೊಟ್ಟ ಮೊದಲ ಬಾರಿಗೆ ನಿವೃತ್ತ ಸೈನಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತಂದ ಮಹಾನ್ ನಾಯಕ. ಇಂತಹ ನಾಯಕರ ಜೀವನಶೈಲಿ ಮತ್ತು ಆಡಳಿತ ವ್ಯವಸ್ಥೆಯನ್ನು ಇಂದಿನ ಯುವಕರು ಅಳವಡಿಸಿಕೊಳ್ಳವ ಅಗತ್ಯವಿದೆಂದು ಹೇಳಿದರು.
ಈ ವೇಳೆಯಲ್ಲಿ ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷೆ ರೇಣುಖಾ ಹಾದಿಮನಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರೇಡ್೨ ತಹಶೀಲ್ದಾರ್ ಶಿವಾನಂದ ಬಬಲಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್ ಸಿ ಚಿನ್ನನವರ, ಸಿಡಿಪಿಒ ಯಲ್ಲಪ್ಪ ಗದಾಡಿ, ಪುರಸಭೆ ಮುಖ್ಯಾಧಿಕಾರಿ ದೀಪಕ್ ಹರ್ದಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್ ವ್ಹಿ ಕಲ್ಲಪ್ಪನವರ, ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಭಾರತಿ ಕೋಣಿ, ಪಿಎಸ್ಐ ಎಚ್ ವೈ ಬಾಲದಂಡಿ ಹಾಗೂ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
Gadi Kannadiga > Local News > ಡಾ.ಬಾಬು ಜಗಜೀವನರಾಮ್ರವರ ೧೧೫ನೇ ಜನ್ಮ ದಿನಾಚರu
More important news
ವಿಧಾನ ಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟ
19/05/2022