ಬೆಳಗಾವಿ: ರಾಜ್ಯಸಭಾ ಸಂಸದರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಬೆಳಗಾವಿ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ಇತ್ತೀಚೆಗೆ 230 ಕೋಟಿ ರೂಪಾಯಿಗಳ ವಿಸ್ಕೃತ ಯೋಜನಾ ವರದಿ ತಯಾರಿಸಲು ಮಂಜೂರಾತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ನಿಲ್ಧಾಣ ಪ್ರಾಧಿಕಾರ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ, ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು.
ನಂತರ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ವಿಮಾನ ನಿಲ್ದಾಣ ವಿಸ್ತರಣೆ ಮಾಡಲು ಇನ್ನೂ 56 ಎಕರೆ ಜಮೀನಿನ ಅವಶ್ಯಕತೆ ಇದ್ದು, ಅದನ್ನು ವಶಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಚರ್ಚಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಶ್ರೀಮತಿ ಮಂಗಲಾ ಅಂಗಡಿ, ಸದಸ್ಯರಾದ ಶ್ರೀ ಭರತ ದೇಶಪಾಂಡೆ, ಶ್ರೀ ಸಂಜಯ ಭಂಡಾರಿ, ಶ್ರೀ ಆಯ್.ಜಿ ದೇಯಣ್ಣವರ, ಶ್ರೀ ಗುರುದೇವ ಪಾಟೀಲ್ ಶ್ರೀಮತಿ ಪ್ರಿಯಾಂಕಾ ಅಜ್ರೇಕರ್, ಶ್ರೀ ಅನುಪ್ ಕಾಟೆ, ವಿಮಾನ ನಿಲ್ದಾಣ ನಿರ್ದೇಶಕ ಶ್ರೀ ಎಸ್ ತ್ಯಾಗರಾಜನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.