This is the title of the web page
This is the title of the web page

Please assign a menu to the primary menu location under menu

Local News

ಏಪ್ರಿಲ್ ೫ ರಂದು ಡಾ.ಬಾಬು ಜಗಜೀವನರಾಮ್ ರವರ ೧೧೫ ನೇ ಜನ್ಮ ದಿನಾಚರಣೆ


ಬೆಳಗಾವಿ,ಮಾರ್ಚ್ ೩೧ : ರಂದು ಹಸಿರು ಕ್ರಾಂತಿ ಹರಿಕಾರ ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಮಂತ್ರಿಯಾದ ಡಾ.ಬಾಬು ಜಗಜೀವನರಾಮ್ ರವರ ೧೧೫ ನೇ ಜನ್ಮ ದಿನಾಚರಣೆ ಮಂಗಳವಾರ(ಏಪ್ರಿಲ್ ೫) ರಂದು ನಡೆಯಲಿದೆ.
ಬೆಳಿಗ್ಗೆ ೯.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಹೊರಡುವುದು. ಬೆಳಿಗ್ಗೆ ೧೧ ಗೆ ಬೆಳಗಾವಿಯ ಸಂಗಮೇಶ್ವರ ನಗರ ಡಾ.ಬಾಬು ಜಗಜೀವನರಾಮ್ ಉದ್ಯಾನವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವುದು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜರಗುವ ಕಾರ್ಯಕ್ರಮವನ್ನು ಜಲಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ, ಕಾರಜೋಳ ಉದ್ಘಾಟಿಸುವರು.
ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ವಿ. ಕತ್ತಿ ಹಾಗೂ ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಅ. ಜೊಲ್ಲೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ತಕ್ಷತೆಯನ್ನು ಬೆಳಗಾವಿ ಉತ್ತರದ ಶಾಸಕರಾದ ಅನೀಲ ಎಸ್. ಬೆನಕೆ ಅವರು ವಹಿಸಲಿದ್ದು, ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ವಿಶ್ವನಾಥ(ಆನಂದ) ಚ. ಮಾಮನಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಎಂ. ಐಹೊಳೆ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಮಗದ ಅಧ್ಯಕ್ಷರಾದ ಪಿ. ರಾಜೀವ ಅವರು ವಿಶೇಷ ಆಮಂತ್ರಿತರಾಗಿ ಆಹ್ವಾನಿಸಲಿದ್ದಾರೆ.
ಲೋಕಸಭೆ, ರಾಜ್ಯಸಭೆ, ವಿಧಾನ ಸಭೆ, ವಿಧಾನ ಪರಿಷತ್ತಿನ ಶಾಸಕರು ಮತ್ತು ಸಂಸದರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಡಾ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಅಧ್ಯಕ್ಷರು, ಬೆಳಗಾವಿ ನಗರಾಭಿವೃದ್ಧಿ ಪ್ರಧಿಕಾರದ ಅಧ್ಯಕ್ಷರು, ಬೆಳಗಾವಿ ವಿಭಾಗದ ಪ್ರದೇಶಿಕ ಆಯುಕ್ತರು ಹಾಗೂ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಪ್ರಕಾಶ ಎಸ್. ಕಟ್ಟೀಮನಿ ಅವರು ಡಾ.ಬಾಬು ಜಗಜೀವನರಾಮ್ ಅವರ ಬಗ್ಗೆ ಉಪನ್ಯಾಸ ನೀಡುವರು.
ಬೆಳಗಾವಿ ನಗರದ ಮಹಾನಗರ ಪಾಲಿಕೆಉ ಸದಸ್ಯರು ಮತ್ತು ಬೆಳಗಾವಿ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಚುನಾಯಿತ ಜನ ಪ್ರತಿನಿಧಿಗಳು, ಗಣ್ಯರು ಮತ್ತು ಸಮಸ್ತ ನಾಗರಿಕರು ಹಾಗೂ ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಂಘಟನೆಗಳ ಮುಖಂಡರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ ಎಚ್.ವಿ, ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಗಾಳು ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಉಮಾ ಸಾಲಿಗೌಡರ ಅವರು ಸರ್ವರಿಗೂ ಸ್ವಾಗತ ಕೋರುವರು.


Gadi Kannadiga

Leave a Reply