ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಮಕಾರಟ್ಟಿ ಗ್ರಾಮದಲ್ಲಿ 42.16 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಚಾಲನೆ ನೀಡಿದರು.
ಪಂಚಾಯತ್ ರಾಜ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 15.60 ಲಕ್ಷ ರೂ,ಗಳ ವೆಚ್ಚದಲ್ಲಿ ಸಿಸಿ ರಸ್ತೆಗಳ ನಿರ್ಮಾಣ ಹಾಗೂ ಜಲಜೀವನ್ ಮಿಷನ್ ಯೋಜನೆಯ ವತಿಯಿಂದ 26.56 ಲಕ್ಷ ರೂ,ಗಳ ವೆಚ್ಚದಲ್ಲಿ ಕ್ರಿಯಾತ್ಮಕ ನಳಗಳ ಜೋಡಣೆಯ ಕಾಮಗಾರಿಗಳಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿ ಪೂಜೆಯನ್ನು ಕೈಗೊಂಡು ಚಾಲನೆಯನ್ನು ನೀಡಲಾಯಿತು.
ಇದೇ ಸಮಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ 3 ಹೆಚ್ಚುವರಿ ಕೊಠಡಿಗಳನ್ನು ಹಾಗೂ ಪೇವರ್ಸ್ ಅಳವಡಿಕೆಯ ಹೊರಾಂಗಣವನ್ನು ಸಹ ಶಾಸಕಿ ಹೆಬ್ಬಾಳಕರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ಶಾಲಾ ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.