This is the title of the web page
This is the title of the web page

Please assign a menu to the primary menu location under menu

Local News

೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜೂನ್೨೧ ರಂದು


ಬೆಳಗಾವಿ,ಜೂನ್೧೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜೂನ ೨೧ ರಂದು ಸುವರ್ಣ ವಿಧಾನಸೌಧದಲ್ಲಿ ಬೆಳಿಗ್ಗೆ ೬ ಗಂಟೆಗೆ ೮ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಭಾರತ ಸೇವಾ ದಳ, ನೆಹರು ಯುವ ಕೇಂದ್ರ ಬೆಳಗಾವಿ ಇವರ ಸಹಯೋಗದಲ್ಲಿ ಯೋಗ ದಿನಾಚರಣೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ಕಾರ್ಯಕ್ರಮ ಉದ್ಘಾಟಿಲಿಸಿದ್ದಾರೆ. ಆಹಾರ ಮತ್ತು ನಾಗರಿಕ ಸಚಿವ ಉಮೇಶ ಕತ್ತಿ, ಮುಜರಾಯಿ ಹಜ್ ಹಾಗೂ ವಕ್ಫ ಸಚಿವೆ ಶಶಿಕಲಾ ಜೊಲ್ಲೆ, ಬೆಳಗಾವಿ ಸಂಸದೆ ಮಂಗಲಾ ಅಂಗಡಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಹಾಗೂ ಜಿಲ್ಲೆಯ ಎಲ್ಲ ಶಾಸಕರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ. ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರು, ಜನ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಆಯುಷ್ ಆಧಿಕಾರಿಗಳಾದ ಶ್ರೀಕಾಂತ ಸುಣಧೋಳಿ ಅವರು ಪ್ರಕಟಣೆಯಲ್ಲಿ ತಿಲಿಸಿದ್ದಾರೆ.


Gadi Kannadiga

Leave a Reply