This is the title of the web page
This is the title of the web page

Please assign a menu to the primary menu location under menu

State

ವಿಧಾನಸಭೆ ಚುನಾವಣೆ: ಜಿಲ್ಲೆಯ ವಿಕಲ ಚೇತನರಿಂದ ಪ್ರತಿಶತ ಶೇ.೭೫.೨೪ ರಷ್ಟು ಮತದಾನ”


ಬೆಳಗಾವಿ, ಮೇ.೧೧ : ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-೨೦೨೩ ರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ವಿಕಲಚೇತನರಿಂದ ಪ್ರತಿಶತ ಶೇ.೭೫.೨೪ ರಷ್ಟು ಮತದಾನವಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿಗಳು ಇವರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ವಿಕಲಚೇತನ ಮತದಾರರು ಮತದಾನ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ೧೮ ವಿಧಾನಸಭಾ ಮತಕ್ಷೇತ್ರಗಳಲ್ಲಿನ ಎಲ್ಲಾ ಮತಗಟ್ಟೆಗಳಲ್ಲಿ ಬರುವ ವಿಕಲಚೇನರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ, ಗಾಲಿಖುರ್ಚಿ, ಭೂತಕನ್ನಡಿ, ವಿಕಲಚೇತನಸ್ನೇಹಿ ವಿಶೇಷ ಮತಗಟ್ಟೆಗಳು, ರ‍್ಯಾಂಪ್/ ರೇಲಿಂಗ್ಸ್ ವ್ಯವಸ್ಥೆ ಹಾಗೂ ಅಗತ್ಯವಿದ್ದಲ್ಲಿ ಮತದಾರರನ್ನು ಕರೆತರಲು ವಾಹನಗಳ ವ್ಯವಸ್ಥೆ, ಸ್ವಯಂ ಸೇವಕರು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಅಡೆತಡೆರಹಿತ ಶೌಚಾಲಯ ವ್ಯವಸ್ಥೆ ಮುಂತಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿತ್ತು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply