This is the title of the web page
This is the title of the web page

Please assign a menu to the primary menu location under menu

Local News

ಆಗಸ್ಟ್.೧೫ ರಂದು ೭೭ ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆ


ಬೆಳಗಾವಿ, ಆ.೧೧ : ಬೆಳಗಾವಿಯ ಜಿಲ್ಲಾಡಳಿತ ವತಿಯಿಂದ ೭೭ ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಪ್ರಯುಕ್ತ ಆಗಸ್ಟ್.೧೫ ೨೦೨೩ ರಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ್ ಲ. ಜಾರಕಿಹೊಳಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಧ್ವಜಾರೋಹನವನ್ನು ನೆರವೇರಿಸಿ ಸ್ವಾತಂತ್ರೊö್ಯÃತ್ಸವದ ಸಂದೇಶವನ್ನು ನೀಡಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಹಾಗೂ ಕರ್ನಾಟಕ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಮ. ಪಟ್ಟಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಕೆ. ಪಾಟೀಲ, ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರಾದ ಸಂಜಯ ಬಿ. ಶಟ್ಟೆಣ್ಣವರ, ಆರಕ್ಷಕ ಮಹಾನಿರೀಕ್ಷಕರಾದ ವಿಕಾಶ್ ಕುಮಾರ್ ವಿಕಾಶ್, ಬೆಳಗಾವಿ ನಗರ ಪೋಲಿಸ ಆಯುಕ್ತರಾದ ಎಸ್. ಎನ್. ಸಿದ್ದರಾಮಪ್ಪ, ಪೊಲೀಸ ವರಿಷ್ಠಾಧಿಕಾರಿಗಳಾದ ಸಂಜೀವ ಎಂ. ಪಾಟೀಲ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೋಯರ್ ಹಾಗೂ ನಗರದ ಹಿರಿಯರು ಮತ್ತು ಗಣ್ಯ ಮಾನ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Leave a Reply