ಸಂಡೂರು,ಆ.೦೨: ಗೃಹಲಕ್ಷಿ÷್ಮ ಯೋಜನೆಯ ನೋಂದಣಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವುದಕ್ಕೆ, ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂಡೂರು ತಾಲೂಕಿನ ಅಂಕಮನಾಳು ಗ್ರಾಮದ ಗ್ರಾಮಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಎಂಬುವಾತ ಗೃಹಲಕ್ಷಿ÷್ಮ ಯೋಜನೆಯ ಫಲಾನುಭವಿಗಳ ಪ್ರತಿ ಅರ್ಜಿದಾರರಿಂದ ರೂ.೫೦/- ಹಣ ಪಡೆಯುತ್ತಿರುವುದು ಕಂಡುಬಂದಿದ್ದು, ಸಂಡೂರು ತಾಲೂಕಿನ ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಂಕಮನಾಳು ಗ್ರಾಮದ ಮಾರೆಮ್ಮ ಗುಡಿ ಹತ್ತಿರ ಸಾರ್ವಜ£ಕ ಸ್ಥಳದಲ್ಲಿ ಕುಳಿತು, ಉದ್ದೇಶ ಪೂರ್ವಕವಾಗಿ ಗೃಹಲಕ್ಷಿ÷್ಮ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ ರೂ.೫೦/- ಹಣ ಸ್ವೀಕರಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆ.೦೧ ರಂದು ಮಧ್ಯಾಹ್ನ ೦೨ ಕ್ಕೆ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು.
ಸಂಡೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳೆನಾಗಪ್ಪ, ಅಂಕಮನಾಳು ಗ್ರಾಮದ ಗ್ರಾಮ ಆಡಳಿತಾಧಿಕಾರಿ ಬಿ.ಕೊಟ್ರಪ್ಪ, ಚೋರನೂರು ಪಟ್ಟಣದ ಕಂದಾಯ £ರೀಕ್ಷಕ ಬಿ.ವೀರೇಂದ್ರಕುಮಾರ ಅವರು ದಾಳಿ ನಡೆಸಿ ಅಕ್ರಮವನ್ನು ಪತ್ತೆ ಹಚ್ಚಿದ್ದರು.
ರಾಜ್ಯ ಸರ್ಕಾರದ ಗೃಹಲಕ್ಷಿ÷್ಮ ಯೋಜನೆಯಡಿ ನೋಂದಣಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಂದ ಯಾವುದೇ ಶುಲ್ಕ ಪಡೆಯಬಾರದು ಎಂದು ಸರ್ಕಾರದ ಆದೇಶ ಇದ್ದರೂ ಸಹಿತ ಗೃಹಲಕ್ಷಿ÷್ಮ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ ರೂ.೫೦/- ಹಣ ಸ್ವೀಕರಿಸಿ ಸರ್ಕಾರಕ್ಕೆ ನಂಬಿಕೆ ದ್ರೋಹಮಾಡಿ ಮೋಸ ಮಾಡಿರುತ್ತಾರೆ. ಹೀಗಾಗಿ ಇವರ ಮೇಲೆ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್ ದೂರು ದಾಖಲಿಸಲಾಗಿದೆ.
Gadi Kannadiga > State > ಸಂಡೂರಿನ ಅಂಕಮನಾಳು ಗ್ರಾಮದಲ್ಲಿ ಗೃಹಲಕ್ಷಿ÷್ಮ ಯೋಜನೆಯ ಫಲಾನುಭವಿಗಳಿಂದ ಹಣ ವಸೂಲು; ಪ್ರಕರಣ ದಾಖಲು
ಸಂಡೂರಿನ ಅಂಕಮನಾಳು ಗ್ರಾಮದಲ್ಲಿ ಗೃಹಲಕ್ಷಿ÷್ಮ ಯೋಜನೆಯ ಫಲಾನುಭವಿಗಳಿಂದ ಹಣ ವಸೂಲು; ಪ್ರಕರಣ ದಾಖಲು
Suresh02/08/2023
posted on

More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023
ನೇರ ಸಂದರ್ಶನ.
22/09/2023