ಗದಗ ಎಪ್ರಿಲ್ ೨೧: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಮಾರ್ಚ/ ಎಪ್ರಿಲ್ ೨೦೨೩ ರ ಮಾಹೆಯಲ್ಲಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾಂiÀiðವು ಎಪ್ರಿಲ್ ೨೧ ರಿಂದ ಮೇ ೫ ರವರೆಗೆ ಜಿಲ್ಲೆಯ ಒಟ್ಟು ೬ ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನ ಕಾರ್ಯ ನಡೆಯುವ ಸಮಯದಲ್ಲಿ ಸದರಿ ಮೌಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಲಾದ ಸಿಬ್ಬಂದಿಯ ಹೊರತಾಗಿ ಬೇರೆ ಯಾವುದೇ ಅನಧಿಕೃತ ವ್ಯಕ್ತಿಗಳ ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದ್ದಾರೆ.
Gadi Kannadiga > State > ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ