This is the title of the web page
This is the title of the web page

Please assign a menu to the primary menu location under menu

State

ಮಾಧ್ಯಮ ಪ್ರತಿನಿಧಿಗಳಿಗೆ ಇ.ವಿ.ಎಂ.ಬಳಕೆ ಕುರಿತು ಪ್ರಾತ್ಯಕ್ಷಿಕೆ ವಿ.ವಿ.ಪ್ಯಾಟ ಮೂಲಕ ಮತದಾನ ಖಚಿತ ಪಡಿಸಿಕೊಳ್ಳಬಹುದು


ಗದಗ ಫೆ.೨: ಅರ್ಹ ಮತದಾರರು ಚಲಾಯಿಸುವ ಮತವು ತಾವು ಚಲಾಯಿಸಿದ ಪಕ್ಷ ಅಥವಾ ವ್ಯಕ್ತಿಗೆ ದಾಖಲಾದ ಬಗ್ಗೆ ಖಾತರಿ ಪಡಿಸಿಕೊಳ್ಳಲು ವಿ.ವಿ.ಪ್ಯಾಟ ಯಂತ್ರ ಸಹಕಾರಿಯಾಗಿದೆ. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ವಿಧ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುವಂತೆ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಮಾಧ್ಯಮ ಪ್ರತಿನಿಧಿಗಳಿಗೆ ವಿಧ್ಯುನ್ಮಾನ ಮತ ಯಂತ್ರ ಬಳಕೆ ಕುರಿತು ಏರ್ಪಡಿಸಲಾದ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ೪೫ ತಂಡಗಳನ್ನು ರಚಿಸಿ ಪ್ರತಿ ಮತಗಟ್ಟೆ ಹಂತದಲ್ಲಿ ಪ್ರಾತ್ಯಕ್ಷಿಕೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಪ್ರತಿ ಗ್ರಾಮದಲ್ಲಿಯೂ ಪ್ರಾತ್ಯಕ್ಷಿಕೆ ವೇಳೆ ನುರಿತ ತರಬೇತಿದಾರರು ಸಾರ್ವಜನಿಕರಿಗೆ ಮತ ಯಂತ್ರ ಬಳಕೆ ಕುರಿತು ಹಾಗೂ ಮತಯಂತ್ರದ ಕುರಿತು ಇರುವ ಸಂದೇಹ ಮತ್ತು ತಪ್ಪು ಗ್ರಹಿಕೆಗಳ ಬಗ್ಗೆ ತಿಳಿಸಿಕೊಡಲಾಗುತ್ತಿದೆ ಎಂದರು.
ಪ್ರಾತ್ಯಕ್ಷಿಕೆ ಕೇಂದ್ರಗಳನ್ನು ಜಿಲ್ಲಾಡಳಿತ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಎಲ್ಲ ತಹಶೀಲ್ದಾರ ಕಚೇರಿಗಳಲ್ಲಿ ತೆರೆಯಲಾಗಿದೆ. ಕಚೇರಿ ಕಾರ್ಯಗಳಿಗೆ ಆಗಮಿಸುವ ಸಾರ್ವಜನಿಕರಿಗೆ ವಿಧ್ಯುನ್ಮಾನ ಮತ ಯಂತ್ರಗಳ ಬಳಕೆ ಕುರಿತು ಅರಿವು ಮೂಡಿಸುವ ಕಾರ್ಯ ಸಾಗಿದೆ ಎಂದರು.ಇ.ವಿ.ಂ. ಬಳಕೆ ಕುರಿತು ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ, ಯುವ ಮತದಾರರಿಗೆ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳಿಗೆ, ವೈದ್ಯರಿಗೆ ವಕೀಲರಿಗೆ ಪೋಲಿಸರಿಗೆ, ಮಹಿಳಾ ಸಂಘಟನೆಗಳಿಗೆ, ಕಾರ್ಮಿಕರಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಅರಿವು ಮೂಡಿಸಲು ಜಿಲ್ಲಾಡಳಿತ ಮುಂದಾಗಿದೆ. ವಿಧ್ಯುನ್ಮಾನ ಮತ ಯಂತ್ರ ಬಳಕೆಯಲ್ಲಿರುವ ಸಂದೇಹಗಳನ್ನು ಪ್ರಾತ್ಯಕ್ಷಿಕೆ ವೇಳೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ. ಅವರು ವಿಧ್ಯುನ್ಮಾನ ಮತ ಯಂತ್ರದ ಬಳಕೆಯ ಪ್ರತಿ ಹಂತಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿ ಪ್ರಾತ್ಯಕ್ಷಿಕೆಯನ್ನು ಸಾದರ ಪಡಿಸಿದರು. ಮತ ಯಂತ್ರ, ಕಂಟ್ರೋಲಿಂಗ ಯುನಿಟ ಹಾಗೂ ವಿ.ವಿ.ಪ್ಯಾಟಗಳ ಕಾರ್ಯ ಹಾಗೂ ಮತ ಚಲಾಯಿಸುವ ಪ್ರಕ್ರಿಯೆಯನ್ನು ಮಾಧ್ಯಮ ಪ್ರತಿನಿಧಿಗಳ ಸಮ್ಮುಖದಲ್ಲಿ ಹಂತ ಹಂತವಾಗಿ ವಿವರಿಸಿದರು.
ಪ್ರತಿ ಮತಗಟ್ಟೆಯಲ್ಲಿ ವಿಧುನ್ಮಾನ ಮತಯಂತ್ರ (ಇ.ವಿ.ಎಂ) ಹಾಗೂ ವಿ.ವಿ.ಪ್ಯಾಟ ಪೆಟ್ಟಿಗೆ ಇಡಲಾಗುತ್ತದೆ. ಮತದಾರ ಮತಗಟ್ಟೆಗೆ ಮತಚಲಾಯಿಸಲು ಬಂದಾಗ ಮತ ಯಂತ್ರದಲ್ಲಿ ಹಸಿರು ದೀಪ ಉರಿಯುತ್ತಿರುವದನ್ನು ಖಚಿತಪಡಿಸಿಕೊಂಡು ಬ್ಯಾಲೇಟ್ ಯುನಿಟನಲ್ಲಿ ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರು, ಚಿಹ್ನೆಯ ಎದುರು ಇರುವ ನೀಲಿ ಗುಂಡಿ ಒತ್ತುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ನಂತರ ಕೆಂಪು ದೀಪ ಹಾಗೂ ಬೀಪ್ ಸದ್ದು ಮತದಾನವಾಗಿರುವದನ್ನು ಖಚಿತ ಪಡಿಸುತ್ತದೆ. ಬಳಿಕ ಪಕ್ಕದಲ್ಲಿರುವ ವಿ.ವಿ.ಪ್ಯಾಟ ಯಂತ್ರದಲ್ಲಿ ತಾವು ಮತ ಚಲಾಯಿಸಿದ ಅಭ್ಯರ್ಥಿಯ ಕ್ರಮ ಸಂಖ್ಯೆ, ಹೆಸರು ಹಾಗೂ ಚಿಹ್ನೆಯನ್ನು ಒಳಗೊಂಡಿರುವ ಚೀಟಿಯನ್ನು ಏಳು ಸೆಕೆಂಡವರೆಗೆ ಮತದಾರ ನೋಡಿ ಮತದನಾವನ್ನು ಖಚಿತ ಪಡಿಸಿಕೊಳ್ಳಬಹುದಾಗಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಮುಖ್ಯ ತರಬೇತಿದಾರ ಪ್ರಶಾಂತ, ಚುನಾವಣೆ ಶಾಖೆ ತಹಶೀಲ್ದಾರ ಎಂ.ಜಿ.ದಾಸಪ್ಪನವರ, ಚುನಾವಣೆ ಶಾಖೆ ಶಿರೇಸ್ತೆದಾರ ವಿನಾಯಕ.ಎಂ.ಸಾಲಿಮಠ, ಸಿಬ್ಬಂದಿಗಳಾದ ರಾಘವೇಂದ್ರ.ಎಸ್, ಶ್ರೀಕಾಂತ ಪಾಟೀಲ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.


Gadi Kannadiga

Leave a Reply