This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ನಡೆದ ವಾಕಥಾನ್


ಕೊಪ್ಪಳ ಏಪ್ರಿಲ್ ೨೬: ‘ದೇಶ ನನ್ನದು ಎಂಬ ಅಭಿಮಾನ ಇರಲಿ.. ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕಾಗಲಿ..’ ‘ಸ್ವೀಪ್ ಕೊಪ್ಪಳ..’ ‘ಪರಿಸರ ರಕ್ಷಣೆಗೆ ಜೈ.. ಮತ ಹಾಕಲು ಸೈ..’ ಎನ್ನುವ ನಾಮ ಫಲಕಗಳು.. ‘ನಮ್ಮ ಮತ-ನಮ್ಮ ಹಕ್ಕು’ ಎನ್ನುವ ಘೋಷಣೆಗಳು.. ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ.. ಪ್ರತಿಜ್ಞಾ ವಿಧಿ ಸ್ವೀಕಾರ ಸೇರಿದಂತೆ ನಾನಾ ಕಾರ್ಯಕ್ರಮಗಳ ಮೂಲಕ ಏಪ್ರೀಲ್ ೨೫ರಂದು ಮತದಾನ ಜಾಗೃತಿ ವಾಕಥಾನ್ ಅರ್ಥಪೂರ್ಣವಾಗಿ ನಡೆಯಿತು.
ಮತದಾನ ಜಾಗೃತಿಯಲ್ಲಿ ಭಾಗಿಯಾಗಿದ್ದ ಯುವಪಡೆಯೊಂದಿಗೆ ಜಿಲ್ಲಾಧಿಕಾರಿಗಳಾದ ಎಂ ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೆಜ್ಜೆ ಹಾಕಿ ಗಮನ ಸೆಳೆದರು.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಹಿನ್ನೆಲೆಯಲ್ಲಿ ಮತದಾರಿಗೆ ಮತದಾನದ ಜಾಗೃತಿಗಾಗಿ ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ನಡೆದ ಈ ಕಾರ್ಯಕ್ರಮಕ್ಕೆ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ತಾಲೂಕು ಕ್ರೀಡಾಂಗಣದಿಂದ ಆರಂಭವಾದ ವಾಕಥಾನ್ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
ಜಾಗೃತಿ ಅಕ್ಷರ ಮಾಲೆ: ಬೃಹತ್ ವಾಕಥಾನ್ ಕಾರ್ಯಕ್ರಮದಲ್ಲಿ ‘ನಥಿಂಗ್ ಲೈಕ್ ವೋಟಿಂಗ್.. ಐ ಓಟ್ ಪಾರ್ ಸುವರ್..’ (ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ) ಎಂಬ ಘೋಷ ವಾಕ್ಯ ಬರೆದಿರುವುದು ಮೈದಾನದಲ್ಲಿ ಆಕರ್ಷನೀಯವಾಗಿತ್ತು.
ಮತದಾನ ಜಾಗೃತಿ ರಥ: ಈ ಕಾರ್ಯಕ್ರಮದಲ್ಲಿ ನೈತಿಕ ಮತದಾನದ ಜಾಗೃತ ಗೀತೆಗಳ ಮುಖಾಂತರ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಕಡ್ಡಾಯ ಮತ್ತು ನೈತಿಕ ಮತದಾನದ ಕುರಿತು ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಡಿ.ಮೋಹನ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರು, ಜಿಲ್ಲಾ ಪಂಚಾಯತ್ ಯೋಜನ ನಿರ್ದೇಶಕರಾದ ಪಿ.ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕೊಪ್ಪಳ ತಹಸೀಲ್ದಾರರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.


Leave a Reply