ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಜರುಗಿದ ಹಾಗೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಜರುಗಿತು
ಮೋಡ ಕವಿದ ವಾತಾವರಣವಿದ್ದರೂ ಸಹ ಮಳೆ ಬಾರದ ಹಿನ್ನೆಲೆಯಲ್ಲಿ ಜನಸಂಕಲ್ಪ ಯಾತ್ರೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಯಾವುದೇ ತೊಂದರೆಯಾಗದ ರೀತಿ ಕಾರ್ಯಕ್ರಮ ಯಶಸ್ವಿಯಾಯಿತು
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರು ಸಜ್ಜಿ ರಾಸಿ ತೂರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ್, ಸಾರಿಗೆ ಸಚಿವರಾದ ಬಿ ಶ್ರೀರಾಮುಲು, ಪ್ರವಾಸೋದ್ಯಮ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್,ದೇವದುರ್ಗಾ ಶಾಸಕರಾದ ಶಿವನಗೌಡ ನಯಕ, ಶಾಸಕರಾದ ಪರಣ್ಣ ಮನವಳ್ಳಿ ಬಸವರಾಜ್ ದಡೇಸುಗೂರು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೊಡ್ಡನಗೌಡ ಎಚ್ ಪಾಟೀಲ್ ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ,ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಕುಷ್ಟಗಿ ಪುರಸಭೆ ಅಧ್ಯಕ್ಷ ಜಿ ಕೆ ಹಿರೇಮಠ,ಬಿಜೆಪಿ ತಾಲೂಕ ಅಧ್ಯಕ್ಷ ಬಸವರಾಜ ಹಳ್ಳೂರ ,ಸೇರಿದಂತೆ ಮಾಜಿ ಸಚಿವರು ಶಾಸಕರು ಸಂಸದರು ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ