This is the title of the web page
This is the title of the web page

Please assign a menu to the primary menu location under menu

State

ಸಕ್ರಿಯ ಕ್ಷಯ ಪತ್ತೆಗೆ ೪೮,೩೭೨ ಸಾವಿರ ಮನೆಗಳ ಸರ್ವೆ ಜಿಲ್ಲೆಯಲ್ಲಿ ಜುಲೈ ೧೭ರಿಂದ ಆಗಸ್ಟ್ ೦೨ರ ವರೆಗೆ ಆಂದೋಲನ


ಗದಗ ಜುಲೈ ೧೫: ಜಿಲ್ಲೆಯಾದ್ಯಂತ ಜುಲೈ ೧೭ ರಿಂದ ಅಗಸ್ಟ ೨ ರವರೆಗೆ ಸಕ್ರಿಯ ಕ್ಷಯ ಪತ್ತೆ ಆಂದೋಲನ ಜರುಗಲಿದ್ದು ಆಂದೋಲನದ ಯಶಸ್ಸಿಗೆ ವಿವಿಧ ಇಲಾಖೆ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ ತಿಳಿಸಿದರು.
ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಾರ್ಯಾಲಯದಲ್ಲಿ ಶನಿವಾರದಂದು ಜರುಗಿದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಅರುಂಧತಿ ಕೆ ಅವರು ಮಾತನಾಡಿ ಜಿಲ್ಲೆಯಾದ್ಯಂತ ಈ ಆಂದೋಲನದಲ್ಲಿ ಒಟ್ಟು ೪೮,೩೭೨ ಮನೆಗಳನ್ನು ಗುರುತಿಸಿದ್ದು ಇದರಲ್ಲಿ ೩೬೩ ತಂಡದೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಸಂಶಯಾಸ್ಪದ ರೋಗಿಗಳನ್ನು ಕಂಡುಹಿಡಿಯಲಾಗುತ್ತಿದೆ .ಕ್ಷಯರೋಗಿಗಳನ್ನು ಮನೆ ಮನೆ ಸರ್ವೆ ಮೂಲಕ ಪತ್ತೆ ಹಚ್ಚುವುದು ಒಂದು ಭಾಗವಾದರೆ ವರ್ಷವಿಡಿ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಬಂದಾಗ ಮತ್ತು ಬೇರೆ ಬೇರೆ ಸಂದರ್ಭದಲ್ಲಿ ಕ್ಷಯರೋಗಿಗಳು ಪತ್ತೆ ಆಗುತ್ತಿರುತ್ತಾರೆ. ಜಿಲ್ಲೆಯಲ್ಲಿ ಪ್ರಸ್ತುತ ೬೪೭ ಕ್ಕೂ ಹೆಚ್ಚು ಕ್ಷಯರೋಗಿಗಳಿದ್ದು ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂದೋಲನ ಸಮಯದಲ್ಲಿ ಹೊಸ ರೋಗಿಗಳ ಪತ್ತೆಗಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಬಾಗಿಲಿಗೆ ಬಂದಾಗ ಸಾರ್ವಜನಿಕರು ಸಹಕಾರವೂ ಅಗತ್ಯವಾಗಿದೆ ಎಂದು ಸಭೆಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನದ ಕುರಿತು ಬಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ನುಚ್ಚಿನ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು, ಹಾಗೂ ಸಂಯೋಜಕರು ಹಾಜರಿದ್ದರು.


Leave a Reply