This is the title of the web page
This is the title of the web page

Please assign a menu to the primary menu location under menu

Local News

ಅಭಯ ಪಾಟೀಲ ಮೇಯರ್, ಅನಿಲ ಬೆನಕೆ ಉಪಮೇಯರ್ :ಸತೀಶ್ ಜಾರಕಿಹೊಳಿ


ಬೆಳಗಾವಿ: ಕೋವಿಡ್‌ ಕಡಿಮೆಯಾದ ಬಳಿಕ ಮುಂದಿನ ದಿನಗಳಲ್ಲಿ ಮೇಕೆದಾಟು ಹೋರಾಟದ ಮಾದರಿಯಲ್ಲಿಯೇ ಮಹದಾಯಿ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಹೋರಾಟ ಎಲ್ಲಿಂದ ಆರಂಭ ಮಾಡಬೇಕೆಂಬುವುದನ್ನು ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ, ರೂಪರೇಷೆ ತಯಾರಿಸಿ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮೇಕೆದಾಟು ಡ್ಯಾಂ ನಿರ್ಮಾಣ ಬಗ್ಗೆ ಈಗಾಗಲೇ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯಲಾಗಿದ್ದು, ಹೋರಾಟ ಅರ್ಧಕ್ಕೆ ನಿಂತಿಲ್ಲ. ಅದು ಯಶ್ವಸಿಯಾಗಿದೆ ಎಂದು ತಿಳಿಸಿದರು.

ಮೇಯರ್‌ ಆಯ್ಕೆ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಪಾಲಿಕೆಯಲ್ಲಿ ಈಗಾಗಲೇ ಅನಧಿಕೃತ ಮೇಯರ್‌, ಉಪ ಮೇಯರ್‌ ಇದ್ದಾರೆ, ಮೇಯರ್‌ ಶಾಸಕರಾದ ಅಭಯ ಪಾಟೀಲ್‌, ಉಪ ಮೇಯರ್‌ ಅನಿಲ ಬೆನಕೆಯವರ ಕೈಯಲ್ಲಿ ಆಡಳಿತ ವಿದೆ ಎಂದ ಅವರು ಇನ್ನುಳಿದವರು ಟೀ, ಬಿಸ್ಕೇಟ್‌ ಗೆ ಸೀಮಿತವಾಗಲಿದ್ದಾರೆ ಎಂದು ಲೇವಡಿ ಮಾಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ ಮಾಜಿ ಸಚಿವ ಎ.ಬಿ. ಪಾಟೀಲ್, ಬಾಗಲಕೋಟೆ‌ ಜಿಪಂ ಮಾಜಿ ಉಪಾಧ್ಯಕ್ಷ ಸುಶೀಲ್ ಬೆಳಗಲಿ ಸೇರಿದಂತೆ ಇತರರು ಇದ್ದರು.


Gadi Kannadiga

Leave a Reply