This is the title of the web page
This is the title of the web page

Please assign a menu to the primary menu location under menu

Local News

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಧಿಕ ಶುಲ್ಕ ಖಂಡಿಸಿ ಎಬಿವಿಪಿ ಪ್ರತಿಭಟನೆ


ಬೆಳಗಾವಿ: ಖಾಸಗಿ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಪ್ರವೇಶಾತಿ ಶುಲ್ಕವನ್ನು ಮನಬಂದಂತೆ ತೆಗೆದುಕೊಂಡು ಬಡವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿವೆ ಕೂಡಲೆ ಸೂಕ್ತಕ್ರಮ ತೆಕೆಗೆದುಕೊಂಡು ನಿರ್ಧಿಷ್ಟ ಶುಲ್ಕ ನಿಗದಿಪಡಿಸಬೇಕೆಂದು ಎಬಿವಿಪಿ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂರಾರು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಖಾಸಗಿ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ಶುಲ್ಕವನ್ನು ಕಡಿಮೆಗೊಳಿಸಬೇಕೆಂದು ಆಗ್ರಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಭಾರತದಲ್ಲಿ ಗ್ರಾಮೀಣ ಪ್ರದೇಶಗಳು ಹೆಚ್ಚಾಗಿದ್ದು ಅಲ್ಲಿಂದ ಬರುವ ವಿದ್ಯಾರ್ಥಿಗಳು ಬಡತನದ ಜೊತೆ ಹೋರಾಡುತ್ತಲೇ ಶಿಕ್ಷಣ ಪಡೆಯಲು ಆಗಮಿಸಿರುತ್ತಾರೆ ಆದರೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮನಬಂದತೆ ಶುಲ್ಕಗಳನ್ನು ತೆಗೆದುಕೊಳ್ಳುತ್ತಿದ್ದು ಹಣ ತುಂಬಲಾಗದೆ ವಿದ್ಯಾರ್ಥಿಗಳು ಶಿಕ್ಷಣವನ್ನೇ ತೊರೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಖಾಸಗಿ ಸಂಸ್ಥೆಗಳಿ ಈ ರೀತಿ ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುತಿದ್ದು ಸರಕಾರವು ಇತ್ತಕಡೆ ಗಮನ ಹರಿಸಿ ನಿರ್ಧಿಷ್ಟ ಶುಲ್ಕವನ್ನು ನಿರ್ಧರಿಸಬೇಕೆಂದು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆಗ್ರಹಿಸಿದರು.

ಸರಕಾರದ ನಿಯಮಕ್ಕನುಸಾರವಾಗಿ ಖಾಸಗಿ ಸಂಸ್ಥೆಗಳು ಶುಲ್ಕವನ್ನು ಪಾವತಿಸಿಕೊಳ್ಳಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಎಬಿವಿಪಿ ವತಿಯಿಂದ ಶಾಸಕ ಮತ್ತು ಸಚಿವರ ಮನೆಗಳಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


Gadi Kannadiga

Leave a Reply