ಕೊಪ್ಪಳ ಆಗಸ್ಟ್ 20 (ಕರ್ನಾಟಕ ವಾರ್ತೆ): ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸದ್ಭಾವನಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿಯವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಲಿಂಗರಾಜು ಟಿ., ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಶ್ರೀಶೈಲ ಎಸ್ ಬಿರಾದಾರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕಿ ಕಾಮಾಕ್ಷಿ
ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.
ಎಲ್ಲ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆ ಮೂಡಿಸಿ ಹಿಂಸಾಚಾರ ತ್ಯಜಿಸುವಂತೆ ಮಾಡಲು ಕೇಂದ್ರ ಸರ್ಕಾರದ ಆದೇಶದಂತೆ ಸದ್ಭಾವನಾ ದಿನ ಆಚರಿಸಲಾಯಿತು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ