ಗದಗ ಎಪ್ರಿಲ್ ೧೧: ಎಪ್ರಿಲ್ ೧೨ ರಂದು ಬೆಳಿಗ್ಗೆ ೧೦.೩೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ಗದಗ ತಹಶೀಲ್ದಾರ ಕಚೇರಿಯಲ್ಲಿ ಲೋಕಾಯುಕ್ತ ಕಚೇರಿಯ ಪೊಲೀಸ ಅಧಿಕಾರಿಗಳಿಂದ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು , ಅಹವಾಲುಗಳನ್ನು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಯಾವುದೇ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಸಬಹುದಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಂತಹ ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಆರಕ್ಷಕ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಅಹವಾಲು ಸ್ವೀಕಾರ