This is the title of the web page
This is the title of the web page

Please assign a menu to the primary menu location under menu

Local News

ಯುಗಾದಿ ಹಬ್ಬಕ್ಕೆ ಬೆಳಗಾವಿ ಜಲ್ಲಾದ್ಯಂತ ಹೆಚ್ಚುವರಿ ಬಸ್ ವ್ಯವಸ್ಥೆ


ಬೆಳಗಾವಿ : ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಗೋಕಾಕ, ರಾಯಬಾಗ ಮತ್ತು ಅಥಣಿ ಘಟಕಗಳಿಂದ ಯುಗಾದಿ ಹಿನ್ನೆಲೆಯಲ್ಲಿ ಏಪ್ರಿಲ್ 1 ಮತ್ತು 2 ರಂದು ಬೆಂಗಳೂರಿನಿಂದ ಬರುವ ಪ್ರಯಾಣಿಕರಿಗಾಗಿ ವಿಶೇಷ ಹೆಚ್ಚುವರಿ ವಾಹನಗಳನ್ನು ರಸ್ತೆಗೆ ಇಳಿಸಲಾಗುತ್ತದೆ.

ಇನ್ನು ಯುಗಾದಿ ಹಬ್ಬ ಆಚರಿಸಿ ಮರಳುವ ಪ್ರಯಾಣಿಕರಿಗಾಗಿ ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಗೋಕಾಕ, ರಾಯಬಾಗ ಮತ್ತು ಅಥಣಿ ಘಟಕಗಳಿಂದ ಏಪ್ರಿಲ್ 3 ಮತ್ತು 4 ರಂದು ಬೆಂಗಳೂರಿಗೆ ವಿಶೇಷ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಿಸಲಾಗುವುದು.

ಪ್ರಯಾಣಿಕರು ಈ ಸಾರಿಗೆಯ ವಿಶೇಷ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಾ.ಕ.ರ.ಸಾ.ಸಂಸ್ಥೆಯ ಚಿಕ್ಕೋಡಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gadi Kannadiga

Leave a Reply