ಬೆಳಗಾವಿ, ಡಿ.೨೮ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೨೦೨೨-೨೩ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಯ ಕೊನೆಯ ಹಂತದ ಅಥವಾ ತಕ್ಷಣ ಪ್ರವೇಶಾತಿ (Sಠಿoಣ ಂಜmissioಟಿ) ಕೌನ್ಸಲಿಂಗ್ ಪ್ರಕ್ರಿಯೆಯು ದಿನಾಂಕ ೩೦-೧೨-೨೦೨೨ ರಂದು ಬೆಳಿಗ್ಗೆ ೧೦ ಗಂಟೆಯಿಂದ ಆಯಾ ವಿಭಾಗಗಳಲ್ಲಿ ಜರುಗಲಿದೆ.
ಆದ್ದರಿಂದ ಈಗಾಗಲೇ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯದ ಅಭ್ಯರ್ಥಿಗಳು ಹಾಗೂ ಸದರಿ ಪ್ರವೇಶಾತಿ ಪ್ರಕ್ರಿಯೆಗೆ ಅರ್ಜಿಯನ್ನು ಸಲ್ಲಿಸದೇ ಇರುವ ಆಸಕ್ತ ಅಭ್ಯರ್ಥಿಗಳು ತಮಗೆ ಸಂಬಂಧಪಟ್ಟ ವಿಭಾಗದಲ್ಲಿ ಖಾಲಿ ಇರುವ ಸೀಟುಗಳನ್ನು ಖಚಿತಪಡಿಸಿಕೊಂಡು ಸದರಿ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್ (ತಿತಿತಿ.ಡಿಛಿub.ಚಿಛಿ.iಟಿ) ಸಂಪರ್ಕಿಸಹುದು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿ ಕೌನ್ಸಲಿಂಗ್ ಪ್ರಕ್ರಿಯೆ ಡಿ.೩೦ ರಂದು