ಕೊಪ್ಪಳ ಡಿಸೆಂಬರ್ ೧೫: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮು ಈಗಾಗಲೇ ಪ್ರಾರಂಭವಾಗಿದ್ದು, ಕಳೆದ ೨-೩ ದಿನದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆ ಇರುವುದರಿಂದ ಹಿಂಗಾರು ಹಂಗಾಮಿನ ಮುಖ್ಯ ಬೆಳೆಗಳಾದ ಕಡಲೆ, ಜೋಳ, ಶೇಂಗಾ ಮತ್ತು ಇತರೆ ಬೆಳೆಗಳಲ್ಲಿ ಕೀಟ/ರೋಗ/ಕಳೆ/ಪೋಷಕಾಂಶದ ಕೊರತೆ, ಬಾಧೆಗಳ ಸಂಭವವಿರುತ್ತದೆ. ಈ ಕುರಿತು ಸೂಕ್ತ ಹತೋಟಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಅವರು ತಿಳಿಸಿದ್ದಾರೆ.
ಈಗಾಗಲೇ ರೈತ ಸಂಪರ್ಕ ಕೇಂದ್ರಗಳಲ್ಲಿ ಸಸ್ಯ ಸಂರಕ್ಷಣೆ ಔಷಧಿಗಳನ್ನು ದಾಸ್ತಾನು ಮಾಡಲಾಗಿರುತ್ತದೆ. ರೈತರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು. ಪ್ರತಿ ರೈತ ಸಂಪರ್ಕಕ್ಕೆ ೧ ರಂತೆ ಕೃಷಿ ಸಂಜೀವಿನಿ ವಾಹನ ಲಭ್ಯವಿದ್ದು, ರೈತರು ನೇರವಾಗಿ ದೂರವಾಣಿ ಮೂಲಕ ರೈತ ಸಂಪರ್ಕ ಕೇಂದ್ರಗಳ ಅಧಿಕಾರಿಗಳನ್ನು ಸಂಪರ್ಕಿಸಿ ವಾಹನವನ್ನು ತಮ್ಮ ಜಮೀನುಗಳಿಗೆ ಅಧಿಕಾರಿಗಳೊಂದಿಗೆ ಸಮೀಕ್ಷೆ ಮಾಡಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ / ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಕೀಟ ಬಾಧೆಗೆ ಸೂಕ್ತ ಹತೋಟಿ ಕ್ರಮ ಕೈಗೊಳ್ಳಲು ಕೃಷಿ ಇಲಾಖೆಯಿಂದ ಸಲಹೆ