ವಿಜಯಪುರ ಡಿ.೨೬: ಕೃಷಿ ವಿಶ್ವವಿದ್ಯಾಲಯ ಧಾರವಾಡ-ವಿಜಯಪುರ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ವಿಜಯಪುರದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಜನವರಿ ೧ ರಿಂದ ೩ರವರೆಗೆ ಕೃಷಿ ಮೇಳ ಆಯೋಜಿಸಲಾಗಿದೆ.
ಜನವರಿ ೧ ರಂದು ಬೆಳಿಗ್ಗೆ ೧೧ ಗಂಟೆಗೆ ಕೃಷಿ ಮೇಳವನ್ನು ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಉದ್ಘಾಟಿಸಲಿದ್ದಾರೆ. ನಾಗಠಾಣ ಮತಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾದ ಎ.ಎಸ್.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ಅವರು ಭಾಗವಹಿಸಲಿದ್ದಾರೆ.
Gadi Kannadiga > State > ಜನವರಿ ೧ರಿಂದ ೩ರವರೆಗೆ ಕೃಷಿ ಮೇಳ