This is the title of the web page
This is the title of the web page

Please assign a menu to the primary menu location under menu

State

ಕಲ್ಯಾಣ ಕರ್ನಾಟಕ ಉತ್ಸವ : ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಅಧಿಕಾರಿಗಳು ಒಗ್ಗೂಡಿ ಶ್ರಮಿಸಿ : ಎಂ. ಸುಂದರೇಶ ಬಾಬು


ಕೊಪ್ಪಳ, ಸೆ. ೧೭ : ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಅಧಿಕಾರಿಗಳು ಒಗ್ಗೂಡಿಕೊಂಡು ಶ್ರಮಿಸಬೇಕು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರು ಹೇಳಿದರು.
೭೫ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ರಾಷ್ಟ್ರ ಧ್ವಜಾರೋಹವನ್ನು ನೆರವೇರಿಸಿ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರö್ಯ ದೊರೆತ ಒಂದು ವರ್ಷ ನಂತರ ಈ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರö್ಯ ದೊರೆತಿದೆ. ನಮ್ಮ ದೇಶಕ್ಕೆ ಸ್ವಾತಂತ್ರö್ಯ ೧೯೪೭ ರಲ್ಲಿ ಸಿಕ್ಕದ್ದರೂ ಸಹ ಇಂದಿನ ಕಲ್ಯಾಣ ಕರ್ನಾಟಕ ಭಾಗವೂ ಹೈದ್ರಾಬಾದ್ ನಿಜಾಮರ ಆಳ್ವಿಕೆಯಲ್ಲಿ ಇತ್ತು. ಅಂದಿನ ಗೃಹ ಮಂತ್ರಿಗಳಾದ ಸರ್ದಾರ್ ವಲ್ಲಭಾಯಿ ಪಟೇಲರ ಧಿಟ್ಟ ಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹೋರಾಟಗಾರ ಪರಿಶ್ರಮದಿಂದ ೧೭ ಸೆಪ್ಟೆಂಬರ್ ೧೯೪೮ ರಲ್ಲಿ ಈ ಭಾಗದಲ್ಲಿ ಸ್ವಾತಂತ್ರö್ಯ ದೊರೆಕಿತು. ಇದರ ಪರಿಣಾಮ ನಾವು ಇಂದು ಪ್ರತಿವರ್ಷ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸುತ್ತೇವೆ ಎಂದರು.
ಹಾಗೇ ನಮ್ಮ ಕೊಪ್ಪಳ ಜಿಲ್ಲೆ ರಚನೆಯಾಗಿ ಪ್ರಸ್ತುತ ೨೫ ವರ್ಷಗಳು ಪೂರ್ಣಗೊಂಡಿವೆ. ೨೫ ವರ್ಷಗಳಲ್ಲಿ ಈ ಭಾಗದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅದರಲ್ಲಿ ಜಿಲ್ಲಾಡಳಿತ ಭವನ, ಮೆಡಿಕಲ್ ಕಾಲೇಜು, ಇಂಜಿನೀಯರಿಂಗ್ ಕಾಲೇಜು, ನೀರಾವರಿ ಹಾಗೂ ಹಲವಾರು ಯೋಜನೆಗಳು ಅನುಷ್ಠಾನಕ್ಕೆ ಬಂದಿವೆ. ಇದಲ್ಲದೇ ರಸ್ತೆ ಮತ್ತು ಇತರೆ ಕಾಮಗಾರಿಗಳು ಕೂಡ ಅಭಿವೃದ್ಧಿಯಾಗಿವೆ. ಕೊಪ್ಪಳ ಜಿಲ್ಲೆಯನ್ನು ಇನ್ನೂ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಟ್ಟಾಗಿ ಕೈಜೋಡಿಸಿ ಕೆಲಸ ಮಾಡಿದಾಗ ಮಾತ್ರ ಜಿಲ್ಲೆಯು ಮಾದರಿಯಾಗುವುದು. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾನಿಯಾದ ಬಗ್ಗೆ ಪರಿಹಾರ ನೀಡುವ ಕ್ರಮವನ್ನು ಕಂದಾಯ ಇಲಾಖೆಯಿಂದ ಶೇ ೯೫ ರಷ್ಟು ಉತ್ತಮವಾಗಿ ನಿರ್ವಹಣೆಯಾಗಿದೆ. ಇದರೊಂದಿಗೆ ಆರ್.ಡಿ.ಪಿ.ಆರ್., ಕೃಷಿ, ತೋಟಗಾರಿಕೆ ಹಾಗೂ ಇತರೆ ಇಲಾಖೆಗಳು ಒಗ್ಗೂಡಿ ಮಳೆ ಮತ್ತು ನೆರೆಯಿಂದ ಹಾನಿಗೊಳಗಾದ ಜನರಿಗೆ, ಬೆಳೆ ಹಾನಿಗೆ ಮತ್ತು ಮನೆ ಹಾನಿಗೆ ಪರಿಹಾರವನ್ನು ಪರಿಹಾರ ನೀಡಲು ಶ್ರಮಿಸಿದ್ದು, ಎಲ್ಲರಿಗೂ ಈ ಸಂದರ್ಭದಲ್ಲಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಾವು ಜನರಿಗೆ ಉತ್ತಮ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಪ್ರಯತ್ನ ಮಾಡೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನುಮ್, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಜಿ.ಪಂ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಆಹಾರ ಉಪನಿರ್ದೇಶಕ ಮಲ್ಲಿಕಾರ್ಜುನ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ರೆಡ್ಡೇರ್, ಪಶು ಇಲಾಖೆ ಉಪನಿರ್ದೇಶಕ ಡಾ. ಹೆಚ್.ನಾಗರಾಜ್, ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


Gadi Kannadiga

Leave a Reply