This is the title of the web page
This is the title of the web page

Please assign a menu to the primary menu location under menu

State

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಕಲ ಸಿದ್ಧತೆ : ಎಂ.ಸುಂದರೇಶ ಬಾಬು


ಕೊಪ್ಪಳ ಮಾರ್ಚ್ ೦೮: ೨೦೨೨-೨೩ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ತಿಳಿಸಿದ್ದಾರೆ.
ಮಾರ್ಚ್ ೦೯ ರಿಂದ ಮಾರ್ಚ ೨೯ ರವರೆಗೆ ಬೆಳಿಗ್ಗೆ ೧೦.೧೫ ರಿಂದ ಮಧ್ಯಾಹ್ನ ೦೧.೩೦ ಗಂಟೆಯವರೆಗೆ ಜಿಲ್ಲೆಯ ಕೊಪ್ಪಳ ನಗರದಲ್ಲಿ ೦೫, ಗಂಗಾವತಿಯ ೦೬, ಕುಷ್ಟಗಿಯಲ್ಲಿ ೦೩ ಪರೀಕ್ಷಾ ಕೇಂದ್ರಗಳು ಮತ್ತು ಯಲಬುರ್ಗಾ, ಕುಕನೂರು, ಕಾರಟಗಿ ಹಾಗೂ ಕನಕಗಿರಿಯಲ್ಲಿ ತಲಾ ಒಂದು ಸೇರಿ ಒಟ್ಟು ೧೮ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗಳು ಸುಗಮ ಮತ್ತು ಶಾಂತಿಯುತವಾಗಿ ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ೧೯೭೩ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.
ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೆಂದ್ರಗಳಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೧೬,೩೦೪ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.


Gadi Kannadiga

Leave a Reply