ಕೊಪ್ಪಳ ಮಾರ್ಚ್ ೦೯: ಕೊಪ್ಪಳ ಜಿಲ್ಲಾ ರಜತ ಮಹೋತ್ಸವಕ್ಕಾಗಿ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ತಿಳಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ ೦೯ ರಂದು ಕೊಪ್ಪಳ ಜಿಲ್ಲಾ ರಜತ ಮಹೋತ್ಸವದ ಸಿದ್ಧತೆಯ ಕುರಿತು ಸಮಗ್ರ ವಿವರಿಸಿದ ಅವರು, ಕೊಪ್ಪಳ ಜಿಲ್ಲೆ ರಚನೆಯಾಗಿ ೨೫ ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಮಾ.೧೦ ಮತ್ತು ಮಾ.೧೧ ರಂದು ಹಮ್ಮಿಕೊಂಡಿದ್ದು, ಉದ್ಘಾಟನಾ ಸಮಾರಂಭ ಮಾ.೧೦ರ ಸಂಜೆ ೬ಕ್ಕೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮುಖ್ಯ ವೇದಿಕೆಗೆ ಕೊಪಣಾಚಲ ಎಂದು ಹೆಸರಿಡಲಾಗಿದೆ. ರಜತ ಮಹೋತ್ಸವದ ಮೆರವಣಿಗೆ ಮಾ.೧೦ರ ಬೆಳಿಗ್ಗೆ ೧೦ ಗಂಟೆಗೆ ತಾಲ್ಲೂಕು ಕ್ರೀಡಾಂಗಣದಿಂದ ಚಾಲನೆ ನೀಡಲಾಗುವುದು. ಜೊತೆಗೆ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರದರ್ಶನ ಮಳಿಗೆ, ರೈತ ಉತ್ಪಾದಕ ಕಂಪನಿಗಳ ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ಮಾರಾಟ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ತಾಲೂಕು ಕ್ರೀಡಾಂಗಣದಲ್ಲಿ ವಿಶೇಷ ಆಕರ್ಷಣೀಯ ಫಲಪುಷ್ಪ ಪ್ರದರ್ಶನ, ಕೃಷಿ-ಶಿಲ್ಪಕಲಾ-ಚಿತ್ರಕಲಾ, ಛಾಯಾಚಿತ್ರ ಮತ್ತು ಕರಕುಶಲ ವಸ್ತು ಪ್ರದರ್ಶನ ಸೇರಿದಂತೆ ಇನ್ನೀತರ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದು ತಿಳಿಸಿದರು.
ಸಾಹಿತ್ಯ ಭವನದ ತಿರುಳ್ಗನ್ನಡನಾಡು ವೇದಿಕೆಯಲ್ಲಿ ರಜತ ಮಹೋತ್ಸವ ನಿಮಿತ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳನ್ನು ಆಯೋಜಿಸಲಾಗಿದೆ. ಜಿಲ್ಲಾ ಕ್ರೀಡಾಂಗಣ ಹಾಗೂ ಸಾಹಿತ್ಯ ಭವನದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರು ಸೇರಿದಂತೆ ಪ್ರಖ್ಯಾತ ಗಾಯಕರು, ಹಾಸ್ಯ ನಟರು ಪಾಲ್ಗೊಂಡು ತಮ್ಮ ಕಲೆಯನ್ನು ಪ್ರದರ್ಶಿಸಲಿದ್ದಾರೆ. ಜಿಲ್ಲೆಯ ಬೆಳ್ಳಿ ಹಬ್ಬದ ಸಂಭ್ರದಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ರಜತ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣಪ್ಪ ಕಲಶೆಟ್ಟಿ, ಕೊಪ್ಪಳ ತಹಶೀಲ್ದಾರರಾದ ಅಮರೇಶ ಬಿರಾದರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Gadi Kannadiga > State > ಕೊಪ್ಪಳ ಜಿಲ್ಲಾ ರಜತ ಮಹೋತ್ಸವಕ್ಕೆ ಸಕಲ ಸಿದ್ಧತೆ: ಎಂ.ಸುಂದರೇಶ ಬಾಬು
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023