ಬೆಳಗಾವಿ : ನಾಡಿನ ವಿಧ್ಯಾರ್ಥಿಗಳಿಗೆ ಹಾಗೂ ಯುವಜನರಿಗೆ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ವಿಚಾರಗಳನ್ನು ಬಿತ್ತುವ ಕಾರ್ಯಮಾಡುತ್ತಿರವ ದಲಿತ ವಿದ್ಯಾರ್ಥಿ ಪರಿಷತ್ ನ ಕಾರ್ಯ ಮೆಚ್ಚುವಂತಹದು ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್. ಜಿ. ಹಿರೇಮಠ ಅವರ ತಿಳಿಸಿದರು.
ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ 131ನೇ ಜಯತಿಯೋತ್ಸವದ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಇಂತಹ ಸ್ಪರ್ಧಾತ್ಮಕ ಪರೀಕ್ಷೆ ಮಾಡುವ ಮೂಲಕ ಅವರ ವಿಚಾರಧಾರೆಯನ್ನು ಎಲ್ಲಾ ವಿಧ್ಯಾರ್ಥಿಗಳಿಗೆ ತಲುಪಿಸಲು ಸಹಾಯಕವಾಗುತ್ತದೆ ಎಂದರು.
ಇದೇ ವೇಳೆ ಮಾತನಾಡಿದ ಪರಿಷತ್ ನ ರಾಜ್ಯ ಕಾರ್ಯದರ್ಶಿ ಅಜಿತ್ ಮಾದರ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಈ ರೀತಿ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿರುವುದು ರಾಜ್ಯದಲ್ಲಿ ಪ್ರಥಮ ಬಾರಿ ಆಗಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಅಭ್ಯರ್ಥಿಗೆ 3 ಲಕ್ಷ, ದ್ವಿತೀಯ ರ್ಯಾಂಕ್ ಪಡೆದ ಅಭ್ಯರ್ಥಿಗೆ 2 ಲಕ್ಷ ಹಾಗೂ ತೃತೀಯ ರ್ಯಾಂಕ್ ಪಡೆದ ಅಭ್ಯರ್ಥಿಗೆ 1 ಲಕ್ಷ ಬಹುಮಾನ ನೀಡಲಾಗುವುದು. ಹೀಗಾಗಿ ಈ ಪರೀಕ್ಷೆಯಲ್ಲಿ ಜಿಲ್ಲೆಯ ವಿಧ್ಯಾರ್ಥಿಗಳು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ಈ ವೇಳೆ ಪರಿಷತ್ ನ ಮುಖಂಡರಾದ ಮಂಜುನಾಥ್ ದೊಡ್ಡಮನಿ ಅಲ್ಲದೇ ಇತರರು ಉಪಸ್ಥಿತರಿದ್ದರು.