ಕೊಪ್ಪಳ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಪರ ಮತಯಾಚಿಸಲು ಮೇ 5 ರಂದು(ಶುಕ್ರವಾರ) ಕೊಪ್ಪಳ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಅಂದು ಸಂಜೆ 5 ಗಂಟೆಗೆ ಗಡಿಯಾರ ಕಂಬ ದಿಂದ ಅಶೋಕ ಸರ್ಕಲ್ ವರೆಗೆ ರೋಡ್ ಶೋ ನಡೆಸಲಿದ್ದಾರೆ. ಸಂಸದ ಕರಡಿ ಸಂಗಣ್ಣ, ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಭಾಗವಹಿಸಲಿದ್ದಾರೆ. ಯುವಕರು, ಮಹಿಳೆಯರು, ಹಿರಿಯರು ಸೇರಿ ಪಕ್ಷ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.
ರೋಡ್ ಶೋ ಬಳಿಕ ಸಂಜೆ 6.30ಕ್ಕೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದು, ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ.