This is the title of the web page
This is the title of the web page

Please assign a menu to the primary menu location under menu

Local News

‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನ ಕಾರ್ಯಕ್ರಮ ಜೂ.೨೫ಕ್ಕೆ ಜಿಲ್ಲೆಯ ೫ ಸ್ಥಳಗಳಲ್ಲಿ ಏಕಕಾಲಕ್ಕೆ ಅಭಿಯಾನ ಕಾರ್ಯಕ್ರಮ


ಬೆಳಗಾವಿ ಜೂನ ೨೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾರತ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನ ಕಾರ್ಯಕ್ರಮವನ್ನು ಶನಿವಾರ(ಜೂನ್೨೫) ಚೆನ್ನಮ್ಮನ ಕಿತ್ತೂರು ಸೇರಿದಂತೆ ವಿವಿಧ ನಾಲ್ಕು ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಚನ್ನಮ್ಮನ ಕಿತ್ತೂರಿನ ಕಾರ್ಯಕ್ರಮದ ವಿವರ:
ಚೆನ್ನಮ್ಮನ ವೃತ್ತದಿಂದ ಕೋಟೆ ಆವರಣದವರೆಗೆ ಬೆಳಿಗ್ಗೆ ೯.೩೦ ಗಂಟೆಗೆ ಮೆರವಣಿಗೆ ನೆಡಯಲಿದೆ. ಬೆಳಿಗ್ಗೆ ೧೦.೩೦ ಗಂಟೆಗೆ ಕಿತ್ತೂರು ಪಟ್ಟಣ ಪಂಚಾಯಿತಿ ಆವರಣದಲ್ಲಿ ಶಿಲಾಫಲಕ ಅನಾವರಣಗೊಳಿಸಲಾಗುವುದು. ವೇದಿಕೆ ಕಾರ್ಯಕ್ರಮ ಬೆಳಿಗ್ಗೆ ೧೧ ಗಂಟೆಗೆ ಕೋಟೆ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ಕಿತ್ತೂರು ಶಾಸಕರಾದ ಮಹಾಂತೇಶ ದೊಡ್ಡಗೌಡ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ರಾಮದುರ್ಗ ತಾಲೂಕಿನ ಹುಲಕುಂದ ಕಾರ್ಯಕ್ರಮ ವಿವರ:
ಬೆಳಿಗ್ಗೆ ೯.೩೦ ಗಂಟೆಗೆ ಹುಲಕುಂದದ ಕರೆಮ್ಮ ದೇವಸ್ಥಾನದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವರೆಗೆ ಮೆರವಣಿಗೆ ನಡೆಯಲಿದೆ. ಬಳಿಕ ೧೦.೩೦ ಗಂಟೆಗೆ ಬಸವಣ್ಣ ಗುಡಿಯ ಹತ್ತಿರ ಶಿಲಾಫಕವನ್ನು ಅವಾವರಣಗೊಳಿಸಲಾಗುವುದು. ವೇದಿಕೆ ಕಾರ್ಯಕ್ರಮ ಬೆಳಿಗ್ಗೆ ೧೧ ಗಂಟೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ರಾಮದುರ್ಗ ಶಾಸಕರಾದ ಮಹದೇವಪ್ಪ ಯಾದವಾಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳವಡಿ ಕಾರ್ಯಕ್ರಮದ ವಿವರ:
ಬೆಳವಡಿ ಮಲ್ಲಮ್ಮ ವೃತ್ತದಿಂದ ಪರಮನಾಯ್ಕರ ಕಲ್ಯಾಣ ಮಂಟಪದ ವರೆಗೆ ಬೆಳಿಗ್ಗೆ ೯.೩೦ ಗಂಟೆಗೆ ಮೆರವಣಿಗೆ ನಡೆಯಲಿದೆ. ಬೆಳವಡಿ ಮಲ್ಲಮ್ಮನ ಬ್ಯಾಂಕ್ ಎದುರುಗಡೆ ಬೆಳಿಗ್ಗೆ ೧೦.೩೦ ಗಂಟೆಗೆ ಶಿಲಾಫಲಕ ಅನಾವರಣಗೊಳಿಸಲಾಗುವುದು. ವೇದಿಕೆ ಕಾರ್ಯಕ್ರಮವನ್ನು ೧೧ ಗಂಟೆಗೆ ಪರಮನಾಯ್ಕರ ಕಲ್ಯಾಣ ಮಂಟದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಹುದಲಿ ಕಾರ್ಯಕ್ರಮದ ವಿವರ:
ಹುದಲಿ ಬಸ್ ನಿಲ್ದಾಣದಿಂದ ಗಾಂಧಿ ಭವನದವರೆಗೆ ಬೆಳಿಗ್ಗೆ ೯.೩೦ ಗಂಟೆಗೆ ಮೆರವಣಿಗೆ ನಡೆಯಲಿದೆ. ಗಾಂಧಿ ಭವನದ ಆವರಣದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ಶಿಲಾಫಲಕ ಅನಾವರಣಗೊಳಿಸಲಾಗುವುದು. ವೇದಿಕೆ ಕಾರ್ಯಕ್ರಮ ಗಾಂಧಿಭವನದ ಆವರಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ಯಮಕನಮರಡಿ ಶಾಸಕರಾದ ಸತೀಶ ಜಾರಕಿಹೊಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ನಂದಗಡ ಕಾರ್ಯಕ್ರಮದ ವಿವರ:
ನಂದಗಡ ಬಸ್ ನಿಲ್ದಾಣದಿಂದ ಕಾಲೇಜು ರಸ್ತೆವರಗೆ ಬೆಳಿಗ್ಗೆ ೯.೩೦ ಗಂಟೆಗೆ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ ೧೦.೩೦ ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಭೂಮಿಯಲ್ಲಿ ಶಿಲಾಫಲಕ ಅನಾವರಣಗೊಳಿಸಲಾಗುವುದು. ಬೆಳಿಗ್ಗೆ ೧೧ ಗಂಟೆಗೆ ಎಪಿಎಂಸಿ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ಖಾನಾಪೂರ ಶಾಸಕರಾದ ಅಂಜಲಿ ನಿಂಬಾಳ್ಕರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲೆಯ ಎಲ್ಲ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಉಮೇಶ ಕತ್ತಿ, ಮುಜರಾಯಿ ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ವಿಶೇಷ ಆಮಂತ್ರಿತರಾಗಿ ವಿಧಾನಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ ಮಾಮನಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಐಹೊಳೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ ಅವರು ಭಾಗಹಿಸಲಿದ್ದಾರೆ. ಇನ್ನುಳಿದಂತೆ ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ಅಧಿಕಾರಿಗಳು ಕಾರ್ಯಕ್ರಮಗಳಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply