This is the title of the web page
This is the title of the web page

Please assign a menu to the primary menu location under menu

Local News

ಧ್ವಜಾರೋಹಣ ನೆರವೇರಿಸಿ ಅದ್ದೂರಿಯಾಗಿ ಅಮೃತ ಮಹೋತ್ಸವ ಆಚರಣೆ


ಬೆಳಗಾವಿ: 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು ನಗರದ ವಿವಿಧ ಇಲಾಖೆಗಳಲ್ಲಿ ಧ್ವಜಾರೋಹಣ ಮಾಡಿ ಗೌರವ ಸಲ್ಲಿಸಲಾಯಿತು. ಕಳೆದ ಮೂರು ದಿನಗಳಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಆಚರಣೆಗೆ ಮೆರಗು ನೀಡಲಾಗಿತ್ತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಧ್ವಜ ಹಾರಿಸಿದರು. ನಂತರ ಜಿಲ್ಲೆಯ ಜನತೆಗೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳನ್ನು ಕೋರಿದರು.

ಇನ್ನು ಜಿಲ್ಲಾ ಕೋರ್ಟ ಆವರಣದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶರಾದ ಪವನೇಶ.ಡಿ ಅವರು ರಾಷ್ಟ್ರಧ್ವಜ ಹಾರಿಸಿದರು.

ಐಜಿಪಿ ಕಚೇರಿ ಮುಂಭಾಗದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಗೌರವ ವಂದನೆ ಸ್ವೀಕರಿಸಿದ ಐಜಿಪಿ ಸತೀಶಕುಮಾರ್ ಅವರು ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಎಲ್ಲರೂ ರಾಷ್ಟ್ರಗೀತೆಯನ್ನು ಹಾಡಿದರು. ಬಳಿಕ ಮಕ್ಕಳಿಗೆ ಐಜಿಪಿ ಸಿಹಿ ವಿತರಿಸಿ, ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.

ನಗರದ ಎಸ್‍ಪಿ ಕಚೇರಿ ಮುಂಭಾಗದಲ್ಲಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪೊಲೀಸರು ರಾಷ್ಟ್ರಗೀತೆ ಹಾಡುವ ಮೂಲಕ ಗೌರವ ವಂದನೆ ಸಲ್ಲಿಸಿದರು.

ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ತುಂಬಿದ್ದು ಭಾರತವು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಈ ಸಂತೋಷದ ಕ್ಷಣವನ್ನು ಭಾರತೀಯರು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ.

 


Gadi Kannadiga

Leave a Reply