This is the title of the web page
This is the title of the web page

Please assign a menu to the primary menu location under menu

Local News

ಸ್ವಾತಂತ್ರö್ಯದ ಅಮೃತ ಮಹೋತ್ಸವ, ಕೇಂದ್ರ ಸರಕಾರದ ೯ ವರ್ಷಗಳ ಸೇವೆ ಕುರಿತು ವಿಶೇಷ ಛಾಯಾಚಿತ್ರ ಪ್ರದರ್ಶನ ಆ.೧೭ ರಿಂದ ಆರಂಭ


ಬೆಳಗಾವಿ, ಆ.೧೬ : ಸ್ವಾತಂತ್ರö್ಯದ ಅಮೃತ ಮಹೋತ್ಸವ, ಕೇಂದ್ರ ಸರ್ಕಾರದ ೯ ವರ್ಷಗಳ ಸೇವೆ, ಸುಶಾಸನ್, ಗರಿಬ್ ಕಲ್ಯಾಣ ಯೋಜನೆ, ಪಿ.ಎಮ್ ಪ್ರಣಾಮ್ ಯೋಜನೆ, ಏಕ ಭಾರತ-ಶ್ರೇಷ್ಠ ಭಾರತ ಹಾಗೂ ವಿವಿಧ ಕಾರ್ಯಕ್ರಮಗಳ ಕುರಿತು ಐದು ದಿನಗಳ ವಿಶೇಷ ಜಾಗೃತಿ ಕಾರ್ಯಕ್ರಮ ಹಾಗೂ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಭಾರತ ಸರಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ವಿಭಾಗದ ವತಿಯಿಂದ ಹಾಗೂ ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಗರದ ಕೃಷ್ಣ ದೇವರಾಯ ವೃತ್ತ(ಕೊಲ್ಲಾಪುರ ಸರ್ಕಲ್)ದಲ್ಲಿ ಮಹೇಶ್ವರಿ ಅಂಧ ಮಕ್ಕಳ ಶಾಲೆಯ ಹತ್ತಿರವಿರುವ ಕ್ರೀಡಾ ಇಲಾಖೆಯ ವಿವಿಧೋದ್ದೇಶಗಳ ಒಳಾಂಗಣ ಕ್ರೀಡಾಂಗಣದಲ್ಲಿ ಐದು ದಿನಗಳವರೆಗೆ ವಿಶೇಷ ಜಾಗೃತಿ ಮತ್ತು ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.
ರಾಜ್ಯಸಭೆ ಸಂಸದರಾದ ಈರಣ್ಣ ಕಡಾಡಿ, ಲೋಕಸಭೆ ಸಂಸದರಾದ ಮಂಗಲ ಸುರೇಶ ಅಂಗಡಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಹಾಗೂ ವಿಧಾನಸಭೆ ಶಾಸಕರಾದ ಆಸಿಫ್ ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಮಹಾನಿರ್ದೇಶಕರಾದ ಎಸ್. ಜಿ. ರವೀಂದ್ರ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ. ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೋಯರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಗುರುನಾಥ್ ಕಡಬೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ. ಎಂ. ಕಾಂಬಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಾಗರಾಜ ಆರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎ. ಬಿ. ಪುಂಡಲಿಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರಾದ ಬಿ. ಶ್ರೀನಿವಾಸ್ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾದ ಭಾರತ ಸೇವಾದಳದ ನಿವೃತ್ತ ರಾಜ್ಯದಳಪತಿ ಬಸವರಾಜ ಹಟ್ಟಿಗೌಡರ ಮತ್ತು ನಗರದ ಮತ್ತು ಇತರ ಗಣ್ಯರು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಭಾರತ ಸರಕಾರದ ಕೇಂದ್ರ ಸಂವಹನ ವಿಭಾಗದ ಧಾರವಾಡದ ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಎಸ್. ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐದು ದಿನಗಳ ಕಾಲ ವಿಶೇಷ ಕಾರ್ಯಕ್ರಮ:
ವಿಶೇಷ ಜಾಗೃತಿ ಕಾರ್ಯಕ್ರಮ ಹಾಗೂ ಛಾಯಾಚಿತ್ರ ಪ್ರದರ್ಶನವು ನಗರದ ಕೃಷ್ಣ ದೇವರಾಯ ವೃತ್ತ(ಕೊಲ್ಲಾಪುರ ಸರ್ಕಲ್)ದಲ್ಲಿ ಮಹೇಶ್ವರಿ ಅಂಧ ಮಕ್ಕಳ ಶಾಲೆಯ ಹತ್ತಿರವಿರುವ ಕ್ರೀಡಾ ಇಲಾಖೆಯ ವಿವಿಧೋದ್ದೇಶಗಳ ಒಳಾಂಗಣ ಕ್ರೀಡಾಂಗಣದಲ್ಲಿ ಆ.೧೭ ರಿಂದ ೨೧ ರವರೆಗೆ ಪ್ರತಿದಿನ ಬೆಳಿಗ್ಗೆ ೧೦.೩೦ ರಿಂದ ೫.೩೦ ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶವಿರುತ್ತದೆ.
ಪ್ರತಿದಿನ ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆ ಮತ್ತು ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಶಾಲಾ ತಂಡಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳು ಜರುಗಲಿವೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಬೇಕು ಎಂದು ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಎಸ್.ಟಿ. ಪ್ರಕಟಣೆಯಲ್ಲಿ ಕೋರಿದ್ದಾರೆ.


Leave a Reply