This is the title of the web page
This is the title of the web page

Please assign a menu to the primary menu location under menu

Local News

ಶಿವಶರಣ ಹಡಪದ ಅಪಣ್ಣನವರ ಜಯಂತಿ ಜುಲೈ ೧೩ ರಂದು


ಬೆಳಗಾವಿ, ಜುಲೈ ೧೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ(ಜು.೧೩) ಶಿವಶರಣ ಹಡಪದ ಅಪ್ಪಣನವರ ಜಯಂತಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಕೋಟೆ ಕೆರೆಯಿಂದ ಕುಮಾರ ಗಂಧರ್ವ ಕಲಾ ಮಂದಿರವರಗೆ ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರದ ಭವ್ಯ ಮರವಣಿಗೆ ನಡೆಯಲಿದೆ. ನಂತರ ೧೧ ಗಂಟೆಗೆ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.
ಜಿಲ್ಲಾ ಉಸ್ತುವಾರಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸುವರು.
ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ ಕತ್ತಿ ಹಾಗೂ ಮುಜರಾಯಿ, ಹಜ್ ಹಾಗೂ ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶಾಸಕರಾದ ಅನಿಲ್ ಎಸ್ ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆ ಎಲ್ಲಾ ಜನ ಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಗುರುರಾಜ ಕುಲಕರ್ಣಿ ಮತ್ತು ತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Gadi Kannadiga

Leave a Reply