ಕುಷ್ಟಗಿ:-ಕೆಂಪುಕೋಟೆ ಮೇಲಿನ ತ್ರಿವರ್ಣಧ್ವಜವನ್ನು ಇಳಿಸಿ ಕೇಸರಿಧ್ವಜವನ್ನು ಹಾರಿಸುತ್ತೇವೆ ಎಂಬ ದೇಶದ್ರೋಹದ ಹೇಳಿಕೆ ಕೊಟ್ಟಿರುವ ಕೆ. ಎಸ್. ಈಶ್ವರಪ್ಪ ನವರ ಮೇಲೆ ಕೂಡಲೇ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕುಷ್ಟಗಿ ತಾಲ್ಲೂಕಿನ ಯುವ ಕಾಂಗ್ರೆಸ್ ನೇತೃತ್ವದಲ್ಲಿ ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಹಾಂತೇಶ ಬಂಡೇರ್ ವಕೀಲರು, ನಾಗರಾಜ ಭೋವಿ ಉಪಾಧ್ಯಕ್ಷರು ಕಾಂಗ್ರೆಸ್ ಪಕ್ಷ ವಿಧಾನಸಭಾ ಕ್ಷೇತ್ರ ಕುಷ್ಟಗಿ,ಸದ್ದಾಂ ಹುಸೇನ ಅಮರಾವತಿ, ಶಿವು ಹಿರೇಮನ್ನಾಪೂರ ಯುವ ಮುಖಂಡರು, ಉಪಸ್ಥಿತರಿದ್ದರು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ