This is the title of the web page
This is the title of the web page

Please assign a menu to the primary menu location under menu

Local News

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಜನವರಿ 27 ರ ವರೆಗೆ ವಿಸ್ತರಿಸಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ


ಬೆಳಗಾವಿ: 2021-22 ನೇ ಸಾಲಿನ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ.1, 2ಎ, 2ಬಿ, 3ಎ, 3ಬಿ, ಪ್ರ.ಜಾ/ಪ್ರ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ ದಿನಾಂಕವನ್ನು ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ 27 ರ ವರೆಗೆ ವಿಸ್ತರಿಸಲಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲಾತಿ ಹಾಗೂ ಸರ್ಕಾರದ ಆದೇಶ ಮತ್ತು ಅರ್ಜಿಯನ್ನು ಇಲಾಖೆಯ ವೆಬ್ ಸೈಟ್ www.bcwd.karnataka.gov.in ನಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ bcwd.karnataka.gov.in ಇ-ಮೇಲ್ : [email protected] ಸಹಾಯವಾಣಿ ಸಂಖ್ಯೆ 080-8050370006 ಮುಖಾಂತರ ಹಾಗೂ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲಾಗಳೊಂದಿಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply