This is the title of the web page
This is the title of the web page

Please assign a menu to the primary menu location under menu

Local News

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣದ ತರಬೇತಿಗಾಗಿ ಅರ್ಜಿ ಆಹ್ವಾನ


ಬೆಳಗಾವಿ,ಮೇ.೨೭: ೨೦೨೨-೨೩ನೇ ಸಾಲಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪರಿಶಿ಼಼಼ಷ್ಟ ಪಂಗಡದ ಕಾನೂನು ಪದವಿಧರರಿಗೆ ಆಡಳಿತ ನ್ಯಾಯಾಧಿಕರಣದಲ್ಲಿ ತರಬೇತಿ ನೀಡುವುದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಹಾಗೂ ವಕೀಲ ವೃತ್ತಿ ನಡೆಸಲು ಅರ್ಹತೆಯುಳ್ಳ ಕಾನೂನು ಪದವೀಧರರನ್ನು ಮಾತ್ರ ಈ ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗುವದು, ಮಹಿಳಾ
ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವದು. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು ೪೦ ವರ್ಷಗಳನ್ನು ಮೀರಿರಬಾರದು ಈ ಕುರಿತು ಅಧಿಕೃತ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ವರ್ಷಗಳ ತರಬೇತಿ ನೀಡಲಾಗುವುದು ಹಾಗೂ ಮಾಹೆಯಾನ ೧೦,೦೦೦ ರೂಪಾಯಿಗಳನ್ನು ತರಬೇತಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಮಧ್ಯದಲ್ಲಿ ಬಿಟ್ಟು ಹೋಗಬಾರದು ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಉದ್ಯೋಗ ದೊರೆತಲ್ಲಿ ಈ ನಿಬಂಧನೆ ಅನ್ವಯವಾಗುವದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ ೨೦ ವರ್ಷಗಿಂತ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಅನುಭವವಿರುವ ಖಾಸಗಿ ಹಿರಿಯ ವಕೀಲರಲ್ಲಿ ತರಬೇತಿ ಪಡೆಯಲು ನಿಯೋಜಿಸಲಾಗುವುದು.
ಅಭ್ಯರ್ಥಿಯು ಸರ್ಕಾರದ ಎಲ್ಲ ನಿಭಂದನೆಗೆ ಬಧ್ಧನಾಗಿರುತ್ತೇನೆ ಎಂದು ೨೦ ರೂ.ಗಳ ಛಾಪಾಕಾಗದದ ಮೇಲೆ ಮುಚ್ಚಳಿಕೆಯನ್ನು ಬರೆದುಕೊಡತಕ್ಕದ್ದು. ಆಯ್ಕೆಯಾದ ಅಭ್ಯರ್ಥಿಯು ಸುಳ್ಳು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಒದಗಿಸಿದಲ್ಲಿ ಶಿಕ್ಷೆಗೊಳಪಡುವುದಲ್ಲದೆ ಅವನು ಪಡೆದುಕೊಂಡ ತರಬೇತಿ ಭತ್ಯೆಯ ಪೂರ್ತಿ ಹಣವನ್ನು ವಾರ್ಷಿಕ ಶೇ. ೧೦ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು. ಒಂದು ವೇಳೆ ಬಾಕಿ ವಸೂಲಿ ಉಳಿದಲ್ಲಿ ಭೂಕಂದಾಯ ಬಾಕಿ ನಿಯಮಾವಳಿ ಅನ್ವಯ ವಸೂಲ ಮಾಡಲಾಗುವುದು.
ಅಭ್ಯರ್ಥಿಗಳು ಭರ್ತಿ ಮಾಡಿದ ನಿಗಧಿತ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಪದವಿ ಪರೀಕ್ಷೆ ಹಾಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ವ಼ರ್ಷದ ಕಾನೂನು ಪರೀಕ್ಷೆಗಳ ದೃಢಿಕೃತ ಅಂಕಪಟ್ಟಿ ಮತ್ತು ತೇರ್ಗಡೆ ಹೊಂದಿದ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ ಅಥವಾ ಟಿ. ಸಿ. ಮತ್ತು ಬಾರ್ ಅಸೋಶಿಯೇಶನದಲ್ಲಿ ಸದಸ್ಯತ್ವ ಪಡೆದ ಬಗ್ಗೆ ಪ್ರಮಾಣ ಪತ್ರ ಲಗತ್ತಿಸಬೇಕು. ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಮೇ ೩೦ ರ ಒಳಗೆ ಅರ್ಜಿ ಸಲ್ಲಿಸಬೇಕು ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿಗಳಿಗೆ ಸಲ್ಲಿಸಬೇಕು ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply