ಗದಗ ಅಗಸ್ಟ ೨೧ : ೨೦೨೩-೨೪ ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ ಯೋಜನೆಯಡಿ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರಕ್ಕಾಗಿ ನಾವೀನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಜಿಲ್ಲಾ ಮಟ್ಟದಲ್ಲಿ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಶಸ್ತಿಯನ್ನು ನೀಡಲು ೫ ರಿಂದ ೧೮ ವರ್ಷದ ಒಳಗಿನ ವಯೋಮಿತಿಯೊಳಗಿರುವ ಮಕ್ಕಳಿಗೆ ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು ೮ ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದೆ. ಅಸಾಧಾರಣ ಸಾಧನೆ ಮಾಡಿದ ಮಕ್ಕಳು ಅಸಾಧಾರಣಾ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಸಲ್ಲಿಸಬೇಕು.
ನಾವೀನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ, ಸಂಗೀತ (ಮೂರು ಸೇರಿ ಒಂದು ಕ್ಷೇತ್ರ) ಈ ಕ್ಷೇತ್ರಗಳಲ್ಲಿ ತಮಗೆ ಸಂಬಂಧಿಸಿದ ಒಂದು ಕ್ಷೇತ್ರಕ್ಕೆ ಮಾತ್ರ ಆಯ್ಕೆ ಮಾಡಿಕೊಳ್ಳುವುದು. ಪ್ರತಿಭೆಯನ್ನು ಹೊಂದಿರುವಬಗ್ಗೆ ಪ್ರಮುಖ ದಿನಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕುಗಳನ್ನು ಲಗತ್ತಿಸಬೇಕು. ಅಂತರ ರಾಷ್ಟ್ರೀಯ ಮಟ್ಟದಲ್ಲಿ, ರಾಷ್ಟ್ರ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಜಿಲ್ಲಾ ಮಟ್ಟದಲ್ಲಿ ತಾಲೂಕಾ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು.ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಸಂಬಂಧಿಸಿದ ಕ್ಷೇತ್ರದ ಛಾಯಾಚಿತ್ರ ಲಗತ್ತಿಬೇಕು. ಆಯ್ಕೆ ಮಾಡುವ ಕ್ಷೇತ್ರದ ಬಗ್ಗೆ ನಾಲ್ಕು ಸಾಲುಗಳಲ್ಲಿ ಮಾಹಿತಿ ಒದಗಿಸುವುದು. ಪ್ರಶಸ್ತಿಗಾಗಿ ಆಯ್ಕೆ ಮಾಡುವ ಮಕ್ಕಳು ಕನಿಷ್ಠ ೫ ವರ್ಷ ಕರ್ನಾಟಕ ರಾಜ್ಯದಲ್ಲಿ ನೆಲಸಿರತಕ್ಕದ್ದು. ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ ನಂತರ ಮಗು ಮರಣ ಹೊಂದಿದಲ್ಲಿ ಆ ಮಗು ಪ್ರಶಸ್ತಿಗೆ ಅರ್ಹವಾಗಿದ್ದಲ್ಲಿ ಮರಣೋತ್ತರ ಪ್ರಶಸ್ತಿಗೆ ಪರಿಗಣಿಸಬಹುದಗಿದೆ.
ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು.ಅರ್ಜಿಗಳನ್ನು ಪಡೆದು ಸೆಪ್ಟೆಂಬರ್ ೫ರೊಳಗಾಗಿಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಗದಗ, ಕೊಠಡಿ ಸಂ.೦೦೬, ಜಿಲ್ಲಾ ಆಡಳಿತ ಭವನ ಗದಗ (ದೂರವಾಣಿ ಸಂ.೦೮೩೭೨-೨೨೦೭೧೧) ಇಲ್ಲಿ ಕಛೇರಿ ಸಮಯದಲ್ಲಿ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.
Gadi Kannadiga > State > ಅರ್ಜಿ ಆಹ್ವಾನ
ಅರ್ಜಿ ಆಹ್ವಾನ
Suresh21/08/2023
posted on
More important news
ಬೆಳಗಾವಿಯ ಹುಡುಗರ ಸಾಹಸ ” ಪರ್ಯಾಯ”
18/09/2023