This is the title of the web page
This is the title of the web page

Please assign a menu to the primary menu location under menu

State

ಅರ್ಜಿ ಆಹ್ವಾನ


ಗದಗ ಅಗಸ್ಟ ೨೯: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ವಿಳಾಸ:ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೮ ಕೊನೆಯ ದಿನವಾಗಿದೆ.
ಆಸಕ್ತರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು,ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.೩೩%, ವಿಕಲಚೇತನರಿಗೆ ಶೇ.೫% ಹಾಗೂ ತೃತೀಯ ಲಿಂಗಳಿಗೆ ಶೇ.೫% ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)
ಹೆಚ್ಚಿನ ವಿವರಗಳಿಗಾಗಿ ನಿಗಮದ ಸಹಾಯವಾಣಿ: ೯೪೪೮೪ ೫೧೧೧೧ ಗದಗ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: ಬೆಳಿಗ್ಗೆ:೧೦.೦೦ ರಿಂದ ಸಂಜೆ:೫.೩೦ ವರೆಗೆ ಸಂಪರ್ಕಿಸಬಹುದಾಗಿದೆ ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರಕಛೇರಿ ಜಿಲ್ಲಾ ಆಡಳಿತ ಭವನ ರೂ.ನಂ:೨೦೨, ೨ನೇ ಮಹಡಿ, ಗದಗ ಜಿಲ್ಲೆ ಹಾಗೂ ಎಲ್ಲಾ ವಿವರಗಳನ್ನು hಣಣಠಿ://ತಿತಿತಿ.ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ತಿಳಿಯಬಹುದಾಗಿದೆ.


Leave a Reply