ಗದಗ ಸೆಪ್ಟೆಂಬರ್ ೧೨: ಪ್ರಸ್ತುತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಅಕ್ಟೋಬರ ೨೮ ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲು ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಾಗಿದ್ದರಿಂದ ಸಮಾಜ ಸೇವೆ ಕೈಗೊಂಡ ಹಾಗೂ ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಬಗ್ಗೆ ಛಾಯಾಚಿತ್ರ ಹಾಗೂ ದಾಖಲೆ ಸಮೇತವಾಗಿ ಅರ್ಜಿಯನ್ನು ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ರೂ ನಂ: ೧೦೭ ಮೊದಲನೆ ಮಹಡಿ ಜಿಲ್ಲಾಡಳಿತ ಭವನ ಹುಬ್ಬಳ್ಳಿ ರೋಡ್ ಗದಗ ಕಚೇರಿಗೆ ಸೆಪ್ಟಂಬರ ೨೫ ರೊಳಗಾಗಿ ಖುದ್ದಾಗಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ,ಗದಗ ದೂರವಾಣೀ ಸಂಖ್ಯೆ ೦೮೩೭೨-೨೩೧೮೨೮ ಸಂಪರ್ಕಿಸಬಹುದಾಗಿದೆ.
Gadi Kannadiga > State > ಅರ್ಜಿ ಆಹ್ವಾನ
ಅರ್ಜಿ ಆಹ್ವಾನ
Suresh12/09/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023