ಗದಗ ಜನೆವರಿ ೨: ೨೦೨೨-೨೩ ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ , ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು , ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನೆವರಿ ೩೧ ರವರೆಗೆ ವಿಸ್ತರಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಆಗಿದ್ದು ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿಗಾಗಿ ವೆಬ್‌ಸೈಟ್ ವಿಳಾಸhಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದಾಗಿದೆ.