This is the title of the web page
This is the title of the web page

Please assign a menu to the primary menu location under menu

Local News

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಬೆಳಗಾವಿ,ಜುಲೈ.೦೭: ಪ್ರಸಕ್ತ ೨೦೨೨-೨೩ನೇ ಶೈಕ್ಷಣಿಕ ಸಾಲಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ೦೯ ಅಲ್ಪಸಂಖ್ಯಾತರ ಮೇಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮತ್ತು ೦೩ ಅಲ್ಪಸಂಖ್ಯಾತರ ಮೇಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ ೧ ೨೦೨೨ ರಿಂದ ಆಗಸ್ಟ್ ೧೫ ೨೦೨೨ ರವೆರೆಗೆ ಅರ್ಹ ವಿದ್ಯಾರ್ಥಿಗಳು ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಜಿಗಳನ್ನು ಆನ್‌ಲೈನ್ ಭರ್ತಿ ಮಾಡಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ತಾಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಹಾಗೂ ಜಿಲ್ಲಾ/ತಾಲೂಕಾ ಮಾಹಿತಿ ಕೇಂದ್ರಗಳು ೮೮೮೪೨೮೬೦೫೦, ೮೨೧೭೦೮೪೯೮೧, ೯೭೪೨೦೨೩೦೦೮, ೦೮೩೧-೨೯೫೦೩೪೯ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಅಬ್ದುಲ್ ರಶೀದ ಎಮ್ ಮಿರ್ಜನ್ನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply