This is the title of the web page
This is the title of the web page

Please assign a menu to the primary menu location under menu

State

ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ


ಗದಗ ಸೆಪ್ಟೆಂಬರ್ ೨೮: ಹಿಂದುಸ್ಥಾನ ಏರೊನಾಟಿಕ್ಸ್ ಲಿಮಿಟೆಡ್‌ನ ಟ್ರೇನಿಂಗ್ ಸಂಸ್ಥೆ, (ಊಂಐ) ಬೆಂಗಳೂರು ಇವರು, ಫಿಟ್ಟರ್, ಟರ್ನರ್, ಮಶಿನಿಷ್ಟö, ಇಲೆಕ್ಟ್ರಿಶಿಯನ್, ವೆಲ್ಡರ್, ಫೌಂಡರಿಮೆನ್, ಕೋಪಾ, ಪೌಂಡರಿಮೆನ್ ಹಾಗೂ ಶೀಟ್‌ಮೆಟಲ್ ವರ್ಕರ್, ಐ.ಟಿ.ಐ. ಟ್ರೇಡಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ ಚಿಠಿಠಿಡಿeಟಿಣiಛಿeshiಠಿiಟಿಜiಚಿ.oಡಿg/ಛಿಚಿಟಿಜiಜಚಿಣe-ಡಿegisಣಡಿಚಿಣioಟಿ ನಲ್ಲಿ ಮೊದಲು ನೋಂದಣಿಯನ್ನು ಮಾಡಿ, ಅಪ್ರೆಂಟಿಸ್ ನೋಂದಣಿ ಸಂಖ್ಯೆಯೊಂದಿಗೆ ಉದ್ಯೋಗ ವಿನಿಮಯ ಕಛೇರಿಯಲ್ಲಿ ಖುದ್ದಾಗಿ ಭೇಟಿ ನೀಡಿ, ನಿಗದಿತ ನಮೂನೆಯ ಅರ್ಜಿಯನ್ನು ಪಡೆದು, ಭರ್ತಿ ಮಾಡಿ, ಸ್ವಧೃಢೀಕೃತ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಮತ್ತು ರಾಷ್ಟ್ರೀಯ ವೃತ್ತಿ ತರಬೇತಿ ಕೌನ್ಸಿಲ್‌ನಿಂದ ಅಂಗೀಕೃತವಾದ ಸಂಸ್ಥೆಯಿಂದ ಪಡೆದ ಐ.ಟಿ.ಐ. ಎನ್.ಸಿ.ವಿ.ಟಿ. ಪ್ರಮಾಣ ಪತ್ರ ಮತ್ತು ಅಂಕಪಟ್ಟಿಗಳು, ಇತರೆ ಜಾತಿ ಪ್ರಮಾಣಪತ್ರ, ಪಿ.ಎಚ್, ಆರ್ಮಡ ಪಸರ್ನಲ್, ಆಧಾರಕಾರ್ಡಪ್ರತಿ , ಪ್ಯಾನ ಕಾರ್ಡಪ್ರತಿ, ಆನ್‌ಲೈನ್ ಅಪ್ರೆಂಟಿಸ್ ನೋಂದಣಿ ಪ್ರತಿ ಹಾಗೂ ಇತ್ತೀಚಿನ ಎರಡು ಪಾಸ್‌ಪೊರ್ಟ ಸೈಜ್ ಫೊಟೊಗಳೊಂದಿಗೆ ಅಕ್ಟೋಬರ್ ೧೩ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: ೦೮೩೭೨೨೨೦೬೦೯ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ್ ಪಿ ಎನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply