ಗದಗ ಅಕ್ಟೋಬರ್ ೧೨ : ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯು ೨೦೨೨-೨೩ ನೇ ಸಾಲಿನಲ್ಲಿ ಡಿಸೆಂಬರ್ ೨೩ ರಿಂದ ೨೫ ರವರೆಗೆ ವಿಶ್ವವಿದ್ಯಾಲಯದ ಆವರಣದಲ್ಲಿ ‘ತೋಟಗಾರಿಕಾ ಮೇಳ’ವನ್ನು ಹಮ್ಮಿಕೊಳ್ಳಲಾಗಿದೆ. ತೋಟಗಾರಿಕಾ ಮೇಳದಲ್ಲಿ ತೋಟಗಾರಿಕೆಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕೃಷಿಕರಿಗೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ರಾಜ್ಯದ ೨೪ ಜಿಲ್ಲೆಗಳಿಗೆ ಪ್ರತಿಯೊಂದು ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕಾ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವದು.
ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಗದಗ ಜಿಲ್ಲೆಯ ರೈತ/ರೈತ ಮಹಿಳೆಯರು ಅರ್ಜಿ ನಮೂನೆಯನ್ನು ತೋಟಗಾರಿಕಾ ವಿಸ್ತರಣಾ ಶಿಕ್ಷಣ ಘಟಕ, ದೇವಿಹೊಸೂರು ಕಛೇರಿಯಲ್ಲಿ ಪಡೆಯಬಹುದು ಅಥವಾ ತೋ.ವಿ.ವಿ.ಯ ವೆಬ್ಸೈಟ್ತಿತಿತಿ.uhsbಚಿgಚಿಟಞoಣ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಕೂಡ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ ೫ ರೊಳಗಾಗಿ ತೋಟಗಾರಿಕಾ ವಿಸ್ತರಣಾ ಘಟಕ, ದೇವಿಹೊಸೂರು ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ: ೯೧೬೪೪೦೫೨೯೪/೯೪೮೦೬೯೬೩೯೬ ಅಥವಾ ಶುಲ್ಕರಹಿತ ಉದ್ಯಾನ ಸಹಾಯವಾಣಿ ೧೮೦೦-೪೨೫-೭೯೧೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
Gadi Kannadiga > State > ಶ್ರೇಷ್ಟ ತೋಟಗಾರಿಕಾ ರೈತ/ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
More important news
ರೈತ ಬಾಂಧವರ ಗಮನಕ್ಕೆ
07/02/2023
ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
07/02/2023
ಐತಿಹಾಸಿಕ ಲಕ್ಕುಂಡಿ ಉತ್ಸವ : ಮಹಿಳಾ ಗೋಷ್ಟಿ
07/02/2023