ಕೊಪ್ಪಳ ಜುಲೈ ೧೨ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ೧೦ ದಿನಗಳ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅರ್ಜಿದಾರರು ೧೮ ರಿಂದ ೪೫ ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಶನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: ೦೮೫೩೯-೨೩೧೦೩೮, ಮೊ.ಸಂ: ೯೪೮೩೬೧೮೧೭೮, ೯೪೮೧೦೮೫೨೧೭, ೭೨೫೯೦೭೩೮೨೭, ೯೪೪೮೯೪೧೪೧೪ ಇಲ್ಲಿಗೆ ಸಲ್ಲಿಸಬೇಕು.
ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿಸಾಕಾಣಿಕೆ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಜುಲೈ ೧೮ರಂದು ಸಂದರ್ಶನ ನಡೆಯಲಿದ್ದು, ಜುಲೈ ೧೯ರಿಂದ ತರಬೇತಿ ಪ್ರಾರಂಭವಾಗಲಿವೆ ಎಂದು ಕೊಪ್ಪಳ ಎಸ್‌ಬಿಐ ಆರ್‌ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ,ಕುರಿಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ,ಕುರಿಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
Suresh12/07/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023