This is the title of the web page
This is the title of the web page

Please assign a menu to the primary menu location under menu

State

ಒಬಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಕ್ಕೆ ಹಾಗೂ ನೆರವು ಅರ್ಜಿ ಆಹ್ವಾನ


ಕೊಪ್ಪಳ, ಸೆ. : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ(ನಿ) ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ಶೈಕ್ಷಣಿಕ ಸಾಲ ಹಾಗೂ ಆರ್ಥಿಕ ನೆರವು ಸೌಲಭ್ಯ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ(ನಿ) ವತಿಯಿಂದ ೨೦೨೨-೨೩ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆಗಳಲ್ಲಿ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ನಿಗಮದ ಯೋಜನೆಗಳ ವಿವರಗಳು :
ನಿಗಮದ ವಿವಿಧ ಯೋಜನೆಗಳ ವಿವರಗಳು ಇಂತಿವೆ. ೨೦೨೨-೨೩ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) ಯಡಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿ.ಇ.ಟಿ ಮೂಲಕ ಆಯ್ಕೆ ಮಾಡಲಾಗುವುದು.
ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಯಡಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳು ಈಗಾಗಲೇ ಈ ನಿಗಮಗಳಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳು ಉಳಿದ ೦೩ ಮತ್ತು ೦೪ ಕಂತುಗಳ ಸಾಲ ಬಿಡುಗಡೆಗಾಗಿ ಅರ್ಜಿ ಸಲ್ಲಿಸಬಹುದು.
ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ ಸಾಲ ಯೋಜನೆಯಡಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್, ಸೈನ್ಸ್ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಮತ್ತು ಅಲೈಡ್ ಸೈನ್ಸ್ಸ್ ಟೆಕ್ನಾಲಜಿ, ಮೆಡಿಸಿನ್ ಹಾಗೂ ಹ್ಯುಮ್ಯಾನಿಟೀಸ್ ಮತ್ತು ಸೋಶಿಯಲ್ ಸೈನ್ಸ್ಸ್ ಸೇರದಂತೆ ಒಟ್ಟು ೦೬ ಕೋರ್ಸ್ಗಳ ಕ್ಷೇತ್ರಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಈ ಕೋರ್ಸ್ಗಳಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ವಾರ್ಷಿಕ ಗರಿಷ್ಠ ರೂ. ೫ ಲಕ್ಷಗಳಂತೆ ೦೩ ವರ್ಷಗಳ ಅವಧಿಗೆ ಗರಿಷ್ಠ ರೂ. ೧೫ ಲಕ್ಷಗಳ ವರೆಗೆ ಸಾಲವನ್ನು ಪಡೆಯಬಹುದು.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ವಿದ್ಯಾರ್ಥಿಗಳ ಹೆಸರು (ಶ್ರೀ, ಶ್ರೀಮತಿ, ಕುಮಾರಿ, ಕುಮಾರ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಿರಬೇಕು. ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ನ ಸೇವಾ ಸಿಂಧು ಪೋರ್ಟಲ್ ಮೂಲಕ ಅಕ್ಟೋಬರ್ ೨೦ ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ hಣಣಠಿs://ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಂಪರ್ಕಿಸಿ ಅಥವಾ ಸಂಬಂಧಪಟ್ಟ ವೆಬ್‌ಸೈಟ್‌ನ್ನು ಮತ್ತು ನಿಗಮದ ದೂರವಾಣಿ ೦೮೦-೨೨೩೭೪೮೩೨, ಸಹಾಯವಾಣಿ ೯೬೦೬೦೬೬೩೮೯, ೮೮೨೪೩೦೦೪೦೦ ಗೆ ಹಾಗೂ ಕೊಪ್ಪಳ ಕಚೇರಿ ದೂ.ಸಂ: ೦೮೫೩೯-೨೨೧೮೪೭ ಗೆ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ(ನಿ) ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply