This is the title of the web page
This is the title of the web page

Please assign a menu to the primary menu location under menu

Local News

2021ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಆಹ್ವಾನ


ಬೆಳಗಾವಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ 2021ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಳೆದ 5 ವರ್ಷಗಳ ಕ್ರೀಡಾ ಸಾಧನೆಯನ್ನು ಪರಿಗಣ ಸಲಾಗುವುದು. ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು 5 ವರ್ಷ ಪ್ರತಿನಿಧಿಸಿದ ಭಾರತದ ನಿವಾಸಿಯಾದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ಅಂತರರಾಷ್ಟ್ರ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಕರ್ನಾಟಕದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷರಾಷ್ಟ್ರ ಮಟ್ಟದಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರಲೇಬೇಕು.

ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಕ್ರೀಡಾಂಗಣ, ಬೆಳಗಾವಿ ಈ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜುಲೈ 30 2022 ಆಗಿರುತ್ತದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಬೆಳಗಾವಿ ಕಚೇರಿಯ ದೂರವಾಣಿ  ಸಂಖ್ಯೆ 0831-2474101 ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply