This is the title of the web page
This is the title of the web page

Please assign a menu to the primary menu location under menu

State

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ


ಗದಗ ಮಾರ್ಚ ೨೧: ಗದಗ ತಾಲೂಕ ಮಲ್ಲಸಮುದ್ರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ೨೦೨೩-೨೪ ನೇ ಸಾಲಿನಲ್ಲಿ ಪ್ರಾರಂಭವಾಗಲಿರುವ ಪದವಿ ಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಕನ್ನಡ, ಇಂಗ್ಲೀಷ, ಉರ್ದು, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯದಲ್ಲಿ ಆಂಗ್ಲ ಮಾಧ್ಯಮದಲ್ಲಿ ಭೋದಿಸಲು ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾರ್ಚ ೨೮ ರೊಳಗಾಗಿ ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಝಾದ ಭವನ, ಜಿಲ್ಲಾ ನ್ಯಾಯಾಲಯದ ಎದುರುಗಡೆ, ಹುಬ್ಬಳ್ಳಿ, ರಸ್ತೆ ಗದಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ . ಹೆಚ್ಚಿನ ಮಾಹಿತಿಗಾಗಿ ೦೮೩೭೨-೨೯೭೪೯೪ ಸಂಪರ್ಕಿಸಬಹುದಾಗಿದೆ.


Leave a Reply