ಬೆಳಗಾವಿ, ಮೇ.೧೫ : ತೋಟಗಾರಿಕೆ ಇಲಾಖೆಯ ತೋಟಗಾರಿಕೆ ಪ್ರಾಯೋಗಿಕ ತರಬೇತಿ ಯೋಜನೆಯಡಿಯಲ್ಲಿ ೨೦೨೩-೨೪ ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯ ಅಭ್ಯರ್ಥಿಗಳಿಗೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್.೧ ೨೦೨೩ ರಿಂದ ಮಾರ್ಚ.೩೦ ೨೦೨೪ ರ ವರೆಗೆ ೧೦ ತಿಂಗಳ ತೋಟಗಾರಿಕೆ ತರಬೇತಿಗಾಗಿ ೧೧ ಪುರುಷ ಹಾಗೂ ೫ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು, ತರಬೇತಿ ಬಯಸುವ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು ಈ ಬಗ್ಗೆ ಪಹಣಿಯನ್ನು (ಖಖಿಅ) ನೀಡುವುದು ಕಡ್ಡಾಯವಾಗಿರುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ ೧೮ ವರ್ಷ ಹಾಗೂ ಗರಿಷ್ಠ ೩೦ ವರ್ಷಗಳು. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ ೧೮ ವರ್ಷಗಳು ಹಾಗೂ ಗರಿಷ್ಠ ೩೩ ವರ್ಷಗಳು ಇರಬೇಕು.
ಅರ್ಜಿಗಳನ್ನು ಬೆಳಗಾವಿಯ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) /ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ರ ಕಛೇರಿಯಲ್ಲಿ ಅಥವಾ ಇಲಾಖೆಯ ವೆಬ್‌ಸೈಟ್ hಣಣಠಿs://hoಡಿಣiಛಿuಟಣuಡಿeಜiಡಿ.ಞಚಿಡಿಟಿಚಿಣಚಿಞಚಿ.gov.iಟಿ/ ನಲ್ಲಿ ಡೌನ್‌ಲೋಡ ಮಾಡಿಕೊಳ್ಳಬಹುದು.ಮೇ.೨೨ ೨೦೨೩ ರ ಸಂಜೆ ೫ ಗಂಟೆಯ ವರೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ರಾಣಿ ಚನ್ನಮ್ಮ ವೃತ್ತ, ಬೆಳಗಾವಿ ಕಛೇರಿಗೆ ಸಲ್ಲಿಸಬೇಕು.ಅಭ್ಯರ್ಥಿಗಳು ಮೇ.೨೫ ೨೦೨೩ ರಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಬೆಳಗಾವಿ ರವರ ಕಛೇರಿಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ನೇರವಾಗಿ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಈ ಸಂಬಂಧವಾಗಿ ಈ ಕಛೇರಿಯಿಂದ ಮತ್ತೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ. ಈ ಕುರಿತು ದೂರವಾಣಿ ಸಂಖ್ಯೆ ೦೮೩೧-೨೪೫೧೪೨೨ ಮತ್ತು ಹಿಡಕಲ್ ಡ್ಯಾಂ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ ೦೮೩೩೩-೨೬೩೦೦೮ ಗೆ ಸಂಪರ್ಕಿಸಿ ವಿಚಾರಿಸಬಹುದು.
ಹೆಚ್ಚಿನ ವಿವರಗಳಿಗೆ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ರವರ ಕಛೇರಿಯಲ್ಲಿ ವಿಚಾರಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
Suresh15/05/2023
posted on
More important news
ಮಹಿಳೆ ನಾಪತ್ತೆ
02/06/2023
ವ್ಯಕ್ತಿ ನಾಪತ್ತೆ
02/06/2023
ಮಂಗಳೂರು: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
31/05/2023
ಯಡ್ಡೋಣಿ: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
31/05/2023